ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಅರ್ಜಿ ಆಹ್ವಾನ
ರಾಯಚೂರು, 20 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ರಾಜ್ಯದ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು, ನಾಗರಿಕ ಸೇವೆಗಳಾದ ಐ.ಎ.ಎಸ್. ಅಥವಾ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಭಾರತದ ಹಾಗೂ ಕರ್ನಾಟಕದ ಆಡಳಿತಾತ್ಮಕ ಸೇವೆಗಳಲ್ಲಿ ತೊಡಗಿ
ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಅರ್ಜಿ ಆಹ್ವಾನ


ರಾಯಚೂರು, 20 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ರಾಜ್ಯದ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು, ನಾಗರಿಕ ಸೇವೆಗಳಾದ ಐ.ಎ.ಎಸ್. ಅಥವಾ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಭಾರತದ ಹಾಗೂ ಕರ್ನಾಟಕದ ಆಡಳಿತಾತ್ಮಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ಬ್ರಾಹ್ಮಣ ಸಮುದಾಯದ ಫಲಾನುಭವಿಗಳು ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ವೆಬ್ ಸೈಟ್: www.ksbdb.karnataka.gov.in ಲಿಂಕ್ ಮೂಲಕ ಡಿಸೆಂಬರ್ 15ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ ಪಡೆಯುವ ಸಂಬಂಧ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.1 ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 9986332736 ಗೆ ಕರೆ ಮಾಡಿ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಜಿ.ಯು. ಹುಡೇದ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande