ಬಾಗಲಕೋಟೆ ಉಸ್ತುವಾರಿ ಸಚಿವ ತಿಮ್ಮಾಪುರ ಜಿಲ್ಲಾ ಪ್ರವಾಸ
ವಿಜಯಪುರ, 20 ನವೆಂಬರ್ (ಹಿ.ಸ.) : ಆ್ಯಂಕರ್ : ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಅವರು ನವೆಂಬರ ೨೧ ರಿಂದ ೨೬ ವರೆಗೆ ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನವೆಂಬರ ೨೧ ರಂದು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆವರೆಗೆ ಮುಧೋಳ ಸ್ಥ
ಬಾಗಲಕೋಟೆ ಉಸ್ತುವಾರಿ ಸಚಿವ ತಿಮ್ಮಾಪುರ ಜಿಲ್ಲಾ ಪ್ರವಾಸ


ವಿಜಯಪುರ, 20 ನವೆಂಬರ್ (ಹಿ.ಸ.) :

ಆ್ಯಂಕರ್ : ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಅವರು ನವೆಂಬರ ೨೧ ರಿಂದ ೨೬ ವರೆಗೆ ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ ೨೧ ರಂದು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆವರೆಗೆ ಮುಧೋಳ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಸ್ತವ್ಯ ಹೂಡಲಿದ್ದಾರೆ. ೨೨ ರಂದು ಬೆಳಿಗ್ಗೆ ೯ ಗಂಟೆಗೆ ಮುಧೋಳದಲ್ಲಿ ಜರುಗಲಿರುವ ರಾಜ್ಯ ಮಟ್ಟದ ಸೈಕ್ಲಿಂಗ್ ಕಾರ್ಯಕ್ರಮ, ೧೦ ಗಂಟೆಗೆ ತಹಶೀಲ್ದಾರ ಕಚೇರಿಯಲ್ಲಿ ಎಡಿಎಲ್‌ಆರ್, ಡಿಡಿಎಲ್‌ಆರ್, ಉಪವಿಭಾಗಾಧಿಕಾರಿಗಳು, ತಹಶೀಲ್ದಾರ, ಟೌನ್ ಪ್ಲಾನಿಂಗ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನಂತರ ಬಾಗಲಕೋಟೆಗೆ ಪ್ರಯಾಣ ಬೆಳೆಸಿ ನವನಗರದ ಸೆಕ್ಟರ ನಂ.೨೫ರಲ್ಲಿರುವ ಮೇದಾರ ಸಮಾಜದ ನಿವೇಶನದಲ್ಲಿ ಹಮ್ಮಿಕೊಂಡ ಶಿವಶರಣ ಮೇದಾರ ಕೇತಯ್ಯನವರ ೮೯೫ನೇ ರಾಜ್ಯ ಮಟ್ಟದ ಜಯಂತೋತ್ಸವ ಹಾಗೂ ಬೃಹತ್ ಸಮಾವೇಶದಲ್ಲಿ ಭಾಗವಹಿಸುವರು.

ಮಧ್ಯಾಹ್ನ ೨ ಗಂಟೆಗೆ ಮುಧೋಳಕ್ಕೆ ತೆರಳಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಸ್ತವ್ಯ ಮಾಡಲಿದ್ದಾರೆ. ೨೩ ರಂದು ಮುಧೋಳ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ೨೪ ರಂದು ಬೆಳಿಗ್ಗೆ ೧೦ ಗಂಟೆಗೆ ಮುಧೋಳ ತಹಶೀಲ್ದಾರ ಕಚೇರಿಯಲ್ಲಿ ಬಗರ ಹುಕುಂ ಸಭೆಯಲ್ಲಿ ಪಾಲ್ಗೊಂಡು ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾ.ಪಂ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು.

೨೫ ರಂದು ಬೆಳಿಗ್ಗೆ ೯.೩೦ಕ್ಕೆ ಮುಧೋಳದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಿದ ಸಚಿವರು ಬೆ.೧೦.೩೦ಕ್ಕೆ ಜಿ.ಪಂ ನೂತನ ಸಭಾಭವನದಲ್ಲಿ ಜರಗುವ ಜಿ.ಪಂ ತ್ರೆöÊಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿ, ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ೨೬ ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರಕ್ಕೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ೧೦.೩೦ಕ್ಕೆ ಬಾಗಲಕೋಟೆಗೆ ಆಗಮಿಸಲಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಆರ್‌ಬಿಸಿ, ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ, ಮಧ್ಯಾಹ್ನ ೧೨.೩೦ಕ್ಕೆ ಚಾಲುಕ್ಯ ಉತ್ಸವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಬಾಗಲಕೋಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande