

ಬಳ್ಳಾರಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿದಿನ ತರಗತಿಗಳ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆ ಭೋದಿಸಲಾಗುತ್ತಿದೆ.
ಪ್ರತಿದಿನ (ರಜೆದಿನ ಹೊರತುಪಡಿಸಿ) ಬೆಳಿಗ್ಗೆ 09 ರಿಂದ ಮಧ್ಯಾಹ್ನ 01.30 ರ ವರೆಗೆ, ವಿಜ್ಞಾನ ವಿಭಾಗಗಳು ಒಳಗೊಂಡಂತೆ ಸಂಜೆ 04 ಗಂಟೆಯವರೆಗೆ ತರಗತಿ ನಡೆಯಲಿವೆ. ತರಗತಿ ಆರಂಭಕ್ಕೂ ಮುನ್ನ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ತಪ್ಪದೇ ಭಾರತ ಸಂವಿಧಾನದ ಪ್ರಸ್ತಾವನೆವನ್ನು ಓದುತ್ತಾರೆ.
‘ಸಂವಿಧಾನ ಪ್ರಸ್ತಾವನೆಯಲ್ಲಿ ನಮೂದಿಸಲಾದ ತತ್ವಗಳನ್ನು ಎಲ್ಲಾ ವಿದ್ಯಾರ್ಥಿಗಳು ಅಳವಡಿಸಿಕೊಂಡು ಅಂತರ್ಗತಗೊಳಿಸಿದಾಗ ಮಾತ್ರ ಸಂವಿಧಾನದ ಉದ್ದೇಶಗಳನ್ನು ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಬಳ್ಳಾರಿಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಹ್ಲಾದ್ ಚೌಧರಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್