
ಹೊಸಪೇಟೆ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ನವೆಂಬರ್ 24 ರಂದು ಮಧ್ಯಾಹ್ನ 3:15 ಕ್ಕೆ ಹಂಪಿ ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್‍ನಲ್ಲಿ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಅಂದು ಹೊಸಪೇಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ನವೆಂಬರ್ 25 ರಂದು ಬೆ.10:15 ಕ್ಕೆ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆ.11:30 ಕ್ಕೆ ತಾಲೂಕಿನ ನಾಗೇನಹಳ್ಳಿ ಮತ್ತು ಹೊಸಪೇಟೆ ನಗರದಲ್ಲಿ 110 ಕೆವಿ ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆ ಮತ್ತು ಬೈಲುವದ್ದಿಗೆರೆಯಲ್ಲಿ 110 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3:00 ಗಂಟೆಗೆ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್.ಡಿ.ಎಂ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್