
ಹೊಸಪೇಟೆ, 20 ನವೆಂಬರ್ (ಹಿ.ಸ.) :
ಆ್ಯಂಕರ್ : 2024-25 ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸರ್ಕಾರದ ವಿವೇಚನಾ ನಿಧಿಯಡಿ ಸಾಮಾನ್ಯ ಉಪಯೋಜನೆಯಡಿ (ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಉತ್ತಮ ಗುಣಮಟ್ಟದ ತರಕಾರಿ ಬೀಜ ವಿತರಣೆ ಮಾಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಿ.ಜಿ.ಚಿದಾನಂದಪ್ಪ ತಿಳಿಸಿದ್ದಾರೆ.
ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಮತ್ತು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್