
ಕುರುಗೋಡು, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಕುರುಗೋಡು ಜೆಸ್ಕಾಂ ವ್ಯಾಪ್ತಿಯ ಕುರುಗೋಡು ಪಟ್ಟಣದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತು ದುರಸ್ಥಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಎಫ್-9 ಮತ್ತು ಎಫ್-15 ಮಾರ್ಗಗಳಲ್ಲಿ ನಾಳೆ ಬೆಳಿಗ್ಗೆ 08 ರಿಂದ ಸಂಜೆ 04 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-09 ಬಾದನಹಟ್ಟಿ ಎನ್‌ಜೆವೈ ಮಾರ್ಗ ಮತ್ತು ಎಫ್-15 ಸೋಲಾರ್ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ವದ್ದಟ್ಟಿ ಕ್ರಾಸ್, ರಾಂಬಾಬು ಕ್ಯಾಂಪ್, ಅನ್ನಪೂರ್ಣೇಶ್ವರಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್ ಸೇರಿದಂತೆ ಸೋಲಾರ್ ಫೀಡರ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಡಿ.ರಾಜೇಂದ್ರ ಬಾಬು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್