
ಬಳ್ಳಾರಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ತರಕಾರಿ ಬೀಜಗಳನ್ನು ಮಾರಾಟ ಮಾಡುತ್ತಿರುವ ವಿತರಕರಿಗೆ (ಡಿಲರ್ಸ್) ತರಕಾರಿ ಬೀಜ ಮಾರಾಟ ಪರವಾನಿಗೆ ಕಡ್ಡಾಯವಾಗಿದ್ದು, ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಆನ್ ಲೈನ್ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ ಕೋಟಿಮನಿ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತರಕಾರಿ ಮತ್ತು ಹೂ ಬೀಜಗಳನ್ನು ಮಾರಾಟ ಮಾಡುತ್ತಿರುವ ವಿತರಕರು ಮತ್ತು ಡೀಲರ್ಸ್ ತೋಟಗಾರಿಕೆ ಇಲಾಖೆಯಿಂದ ಬೀಜ ಮಾರಾಟ ಪರವಾನಿಗೆ ಪ್ರಮಾಣ ಪತ್ರ ಪಡೆಯದೇ ಬೀಜಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ಸಮಯದಲ್ಲಿ ಕಂಡು ಬಂದಲ್ಲಿ ಅಂತಹ ವಿತರಕರ, ಡೀಲರ್ಸ್, ಮಾಲೀಕರ ಪರವಾನಿಗೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಹಾಗೂ ಬೀಜ ನಿಯಂತ್ರಣ ಕಾಯ್ದೆ ಪ್ರಕಾರ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್