
ಬಳ್ಳಾರಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಆಧುನಿಕ ಆಹಾರ ಪದ್ಧತಿ ಮತ್ತು ಜೀವನ ಶೈಲಿಯ ಕಾರಣ 40 ರಿಂದ 50ರ ಆಸುಪಾಸಿನ ವ್ಯಕ್ತಿಗಳಿಗೆ ಎಲುಬು ಮತ್ತು ಕೀಲುಗಳ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದ್ದು, ರೋಬೋಟಿಕ್ ತಂತ್ರಜ್ಞಾನದ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರಾದ ಡಾ. ಸಮರ್ಥ್ ಅವರು ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೋಬೋಟಿಕ್ ತಂತ್ರಜ್ಞಾನದ ಮೂಲಕ ಎಲುಬು ಮತ್ತು ಕೀಲು ಜೋಡಣೆ ಶಸ್ತ್ರ ಚಿಕಿತ್ಸೆಯು ಅತ್ಯಂತ ಕಡಿಮೆ ವೆಚ್ಚದಲ್ಲಿ ಮತ್ತು ಶೀಘ್ರ ಗುಣಮುಖದ ಯೋಜನೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು.
ಬಳ್ಳಾರಿಯ ಗಾಂಧಿನಗರದಲ್ಲಿ ಇರುವ ಆರಾಧನಾ ಆಸ್ಪತ್ರೆಯಲ್ಲಿ ಪ್ರತಿ ಗುರುವಾರ ಎಲುಬು ಮತ್ತು ಕೀಲು ಚಿಕಿತ್ಸೆ ನಡೆಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನೀಡಲಾಗುತ್ತದೆ ಎಂದು ಅವರು ವಿವರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್