
ಬಳ್ಳಾರಿ, 20 ನವೆಂಬರ್ (ಹಿ.ಸ.):
ಆ್ಯಂಕರ್ : ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರಿ ಶಾಲೆಗಳನ್ನು ನಾನಾ ಕಾರಣಗಳಿಗಾಗಿ ಬೇರೆ ಶಾಲೆಯ ಜೊತೆಯಲ್ಲಿ ವಿಲೀನ ಮಾಡಬಾರದು ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾದ ಜಿಲ್ಲಾ ಘಟಕವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಎಸ್‍ಎಫ್‍ಐನ ರಾಜ್ಯ ಉಪಾಧ್ಯಕ್ಷ ದೊಡ್ಡಬಸವರಾಜ್ ಅವರು, ಕರ್ನಾಟಕ ರಾಜ್ಯ ಸರ್ಕಾರ 700 ಕೆಪಿಎಸ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ 5,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಶಾಲೆಗಳ ಮಾಲೀಕತ್ವದ ಪರವಾಗಿಯೇ ಇದೆ. ವಿಲೀನಗೊಳಿಸಿದ ಶಾಲೆಗಳ ವಿದ್ಯಾರ್ಥಿಗಳು ಕೆಪಿಎಸ್ ಶಾಲೆಗೆ ಹೋಗುತ್ತಾರೆಯೇ? ಎನ್ನುವ ಖಚಿತ ಮಾಹಿತಿ ಸರ್ಕಾರಕ್ಕಿಲ್ಲ ಎಂದರು.
ಕಾರಣ ಸರ್ಕಾರ ಸರ್ಕಾರಿ ಶಾಲೆಗಳ ವಿಲೀನ ಮಾಡದೇ ಶಿಕ್ಷಕರ ನೇಮಕಾತಿ, ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್