
ಜಮ್ಮು, 20 ನವೆಂಬರ್ (ಹಿ.ಸ.) :
ಆ್ಯಂಕರ್ : ದೇಶವಿರೋಧಿ ಚಟುವಟಿಕೆಗಳನ್ನು ಉತ್ತೇಜಿಸಿದ ಆರೋಪದ ಹಿನ್ನೆಲೆಯಲ್ಲಿ ಜಮ್ಮು–ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಗುರುವಾರ ಕಾಶ್ಮೀರ ಟೈಮ್ಸ್ ಕಚೇರಿಯಲ್ಲಿ ತಪಾಸಣೆ ನಡೆಸಿದೆ.
ಅಧಿಕಾರಿಗಳ ಪ್ರಕಾರ, “ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾದ ವಿಷಯಗಳನ್ನು ವೈಭವೀಕರಿಸಿದ” ಆರೋಪದ ಮೇಲೆ ಪತ್ರಿಕೆಯ ವಿರುದ್ಧ ಪ್ರಕರಣ ದಾಖಲಾಗಿದೆ. ದಾಳಿಯ ಸಂದರ್ಭದಲ್ಲಿ ಕಚೇರಿ, ಕಂಪ್ಯೂಟರ್ ಮತ್ತು ದಾಖಲೆಗಳನ್ನು ಪರಿಶೀಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa