ಶಬರಿಮಲೆ : ಮಿದುಳು ತಿನ್ನುವ ಅಮೀಬಾಗೆ ಸುರಕ್ಷತಾ ಸಲಹಾ ಮಾರ್ಗಸೂಚಿ
ರಾಯಚೂರು, 20 ನವೆಂಬರ್ (ಹಿ.ಸ.) : ಆ್ಯಂಕರ್ : ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ meningoencephalitis) ಪ್ರಕರಣಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬ
ಶಬರಿಮಲೆ : ಮಿದುಳು ತಿನ್ನುವ ಅಮೀಬಾಗೆ ಸುರಕ್ಷತಾ ಸಲಹಾ ಮಾರ್ಗಸೂಚಿ


ರಾಯಚೂರು, 20 ನವೆಂಬರ್ (ಹಿ.ಸ.) :

ಆ್ಯಂಕರ್ : ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ meningoencephalitis) ಪ್ರಕರಣಗಳು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ನೇಗ್ಲೇರಿಯಾ ಫೌಲೇರಿ (Naegleria fowlen) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳಲ್ಲಿ ಕಂಡು ಬರುತ್ತದೆ.

ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗ್ಲೇರಿಯಾ ಫೌಲರಿ (Naegleria fowleri) ಅತ್ಯಂತ ವಿಷಕಾರಿ (virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic

meningoencephalitis) ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.

ಆದ್ದರಿಂದ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‍ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behavioural

disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande