ಹೊಲಿಗೆಯಂತ್ರ ವಿತರಣೆ : ಅರ್ಜಿ ಸಲ್ಲಿಸಲು ಡಿಸೆಂಬರ್ 06 ಕೊನೆಯ ದಿನ
ರಾಯಚೂರು, 20 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆಯಂತ್ರ ವಿತರಣೆ : ಅರ್ಜಿ ಸಲ್ಲಿಸಲು ಡಿಸೆಂಬರ್ 06 ಕೊನೆಯ ದಿನ


ರಾಯಚೂರು, 20 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದಾಖಲಾತಿಗಳು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರುವ ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.

ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಓರ್ವ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98.000 ಗಳು ಹಾಗೂ ನಗರ ಪ್ರದೇಶದಲ್ಲಿ ರೂ. 1,20.000 ಗಳನ್ನು ಮೀರತಕ್ಕದ್ದಲ್ಲ. ಅಂಗವಿಕಲ ಮಹಿಳೆಯರಿಗೆ ಶೇ.5 ರಷ್ಟು ಮೀಸಲಿರಿಸಲಾಗಿದೆ.

ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33ರಷ್ಟು, ವಿಕಲಚೇತನರಿಗೆ ಶೇ.5ರಷ್ಟು ಹಾಗೂ ತೃತೀಯ ಲಿಂಗಳಿಗೆ ಶೇ.1ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸಲಾಗುವುದು. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಹೆಚ್.ಐ.ವಿ ಪೀಡಿತರಿಗೆ 35 ವರ್ಷವಯೋಮಿತಿ ಮೀರಿರತಕ್ಕ ಅವಿವಾಹಿತ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸಲಾಗಿದೆ.

ಈ ಯೋಜನೆಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಡಿಸೆಂಬರ್ 06ರರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ವಿಶೇಷ ಸೂಚನೆ: ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರು ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಹಾಗೂ ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 8867537799 ಮತ್ತು ದೂರವಾಣಿ ಸಂಖ್ಯೆ; 080-29903994, ಹಾಗೂ ಕಚೇರಿಯ ವಿಳಾಸ hhttps://kmcdc.karnataka.gov.in ಗೆ, ಬೆಳಗ್ಗೆ 10 ರಿಂದ ಸಂಜೆ 5.30ರ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande