ರಾಜ್ಯದಲ್ಲಿ ತುಷ್ಟೀಕರಣ ರಾಜಕೀಯ : ಅಶೋಕ ಆಕ್ರೋಶ
ಬೆಂಗಳೂರು, 21 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಮುಸ್ಲಿಂ ಭವನಗಳ ನಿರ್ಮಾಣಕ್ಕೆ ₹67 ಕೋಟಿ ರೂಪಾಯಿ ಮೀಸಲಿರಿಸಿರುವುದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರ ತುಷ್ಟೀಕರಣ ರಾಜಕೀಯ ನಡೆಸುತ್ತಿದ
Ashok


ಬೆಂಗಳೂರು, 21 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಮುಸ್ಲಿಂ ಭವನಗಳ ನಿರ್ಮಾಣಕ್ಕೆ ₹67 ಕೋಟಿ ರೂಪಾಯಿ ಮೀಸಲಿರಿಸಿರುವುದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರ ತುಷ್ಟೀಕರಣ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

“ರೈತರು ಬರ–ನೆರೆ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ, ಸರ್ಕಾರಿ ನೌಕರರ ಸಂಬಳ, ಆಸ್ಪತ್ರೆಗಳ ಔಷಧಿ, ಮಕ್ಕಳ ಬಿಸಿಯೂಟ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸರ್ಕಾರ ಹಣದ ಕೊರತೆಯನ್ನು ತೋರಿಸುತ್ತಿದೆ. ಆದರೆ ಮುಸ್ಲಿಂ ಭವನಗಳ ನಿರ್ಮಾಣಕ್ಕೆ ಮಾತ್ರ ₹67 ಕೋಟಿ ಬಿಡುಗಡೆ ಮಾಡಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಿಂದೂಗಳು ಕಾಂಗ್ರೆಸ್‌ಗೆ ಮತ ಹಾಕಿಲ್ಲವೇ? ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾ?” ಎಂದು ಪ್ರಶ್ನಿಸಿರುವ ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ದ ಹರಿಹಾಯ್ದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande