ನ.26, 27 ರಂದು ಬಳ್ಳಾರಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ
ಶಾಸ್ತ್ರೀಯ
ನ.26, 27 ರಂದು ಬಳ್ಳಾರಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ


ನ.26, 27 ರಂದು ಬಳ್ಳಾರಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ


ಬಳ್ಳಾರಿ, 21 ನವೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.26 ಮತ್ತು 27 ರಂದು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ನ.26 ರಂದು ಬೆಳಿಗ್ಗೆ 09.30 ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ಸ್ಪರ್ಧೆಗಳು : ನ.26 ರಂದು ಬೆಳಿಗ್ಗೆ 10 ಗಂಟೆಗೆ ಬಾಲ ಮತ್ತು ಕಿಶೋರ ಪ್ರತಿಭೆಗಳಿಗೆ ಸ್ಪರ್ಧೆ ನಡೆಯಲಿದೆ. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಶಾಸ್ತಿಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ಜಾನಪದ ಗೀತೆಗಳು(7 ನಿಮಿಷ).

ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮ0ದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.

ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತ್ರೀಯ ಸಂಗೀತ(7 ನಿಮಿಷ) ಸ್ಪರ್ಧೆಗಳು ನಡೆಯಲಿವೆ.

ನ.27 ರಂದು ಬೆಳಿಗ್ಗೆ 10 ಗಂಟೆಗೆ ಯುವಪ್ರತಿಭೆ ಮತ್ತು ಸಮೂಹ ಸ್ಪರ್ಧೆಗಳಿಗೆ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಶಾಸ್ತಿಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ನಾಟಕ(45 ನಿಮಿಷ).

ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮ0ದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.

ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತ್ರೀಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತ್ರೀಯ ಸಂಗೀತ(7 ನಿಮಿಷ), ನನ್ನ ಮೆಚ್ಚಿನ ಸಾಹಿತಿ(ಆಶು ಭಾಷಣ)-7 ನಿಮಿಷ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande