ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ಬಾರುಕೋಲು ಚಳವಳಿ
ಗದಗ, 21 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಭ ಮಾಡುವಂತೆ ಅನ್ನದಾತರು ಇಂದು ಬಾರುಕೋಲು ಚಳವಳಿ ನಡೆಸಿದರು. ಕಳೆದ ಏಳು ದಿನಗಳಿಂದ ಅಹೋರಾತ್ರಿ ಧರಣಿ, ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆಗಳಲ್ಲಿ ತೊಡಗಿದ್ದ ರೈತರು ಇಂದು ಬಾ
ಫೋಟೋ


ಗದಗ, 21 ನವೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಭ ಮಾಡುವಂತೆ ಅನ್ನದಾತರು ಇಂದು ಬಾರುಕೋಲು ಚಳವಳಿ ನಡೆಸಿದರು. ಕಳೆದ ಏಳು ದಿನಗಳಿಂದ ಅಹೋರಾತ್ರಿ ಧರಣಿ, ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆಗಳಲ್ಲಿ ತೊಡಗಿದ್ದ ರೈತರು ಇಂದು ಬಾರುಕೋಲು ಹಾಗೂ ಅರೆಬೆತ್ತಲೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ರೋಷ ವ್ಯಕ್ತಪಡಿಸಿದರು.

ಶಿಗ್ಲಿ ಕ್ರಾಸ್ ಬಳಿ ರೈತ ಒಕ್ಕೂಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹಕ್ಕೆ ಆದರಳ್ಳಿ ಗವಿಮಠದ ಕುಮಾರೇಶ್ವ ಮಹಾರಾಜರು ಐದು ದಿನಗಳಿಂದ ಉಪವಾಸದಿಂದ ಬೆಂಬಲ ನೀಡುತ್ತಿದ್ದರು. ಖರೀದಿ ಕೇಂದ್ರ ತೆರೆಯುವವರೆಗೆ ಉಪವಾಸ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಆದರೆ ನಿರಂತರ ಉಪವಾಸದಿಂದ ಅವರು ವೇದಿಕೆಯಲ್ಲೇ ನಿತ್ರಾಣಗೊಂಡು ಅಸ್ವಸ್ಥರಾಗಿದ್ದು, ವೈದ್ಯರು ಪರಿಶೀಲಿಸಿದಾಗ ಬಿಪಿ, ಶುಗರ್ ಹಾಗೂ ದೇಹದ ನೀರಿನ ಪ್ರಮಾಣ ಗಂಭೀರವಾಗಿ ಕಡಿಮೆಯಾಗಿದೆ ಎಂದು ವರದಿ ಮಾಡಿದ್ದಾರೆ. ಸ್ವಾಮೀಜಿ ಚಿಕಿತ್ಸೆ ಪಡೆಯಲು ಮೊದಲಿಗೆ ನಿರಾಕರಿಸಿದರೂ, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿಗಳು ಯಾವುದೇ ಆಹಾರ ಸೇವನೆ ಮಾಡದೆ, ಖರೀದಿ ಕೇಂದ್ರ ಆರಂಭವಾಗುವವರಿಗೆ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದಾರೆ.

ಇದರಿಂದ ರೈತರಲ್ಲಿ ಕೋಪ ಮತ್ತಷ್ಟು ಹೆಚ್ಚಾಗಿದೆ. ಸ್ವಾಮೀಜಿಗಳಿಗೆ ಏನಾದರೂ ಆದರೆ ಸರ್ಕಾರವೇ ಹೊಣೆ ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ₹2,400 ಬೆಂಬಲ ಬೆಲೆ ಘೋಷಿಸಿದ್ದರೂ, ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯದಿರುವುದರ ವಿರುದ್ಧ ರೈತರು ಗಟ್ಟಿಯಾಗಿ ವಾಗ್ದಾಳಿ ನಡೆಸಿದ್ದಾರೆ. ಮಾರುಕಟ್ಟೆಯಲ್ಲಿ 1,500–1,700 ರೂಪಾಯಿಗೇ ಮೆಕ್ಕೆಜೋಳ ಮಾರಾಟವಾಗುತ್ತಿದೆ.

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande