
ಬಳ್ಳಾರಿ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಹೊಸ ದಿಕ್ಕು ತೋರಲು ಉದ್ದೇಶಿಸಿರುವ `ಅಪಾರಲ್ ಪಾರ್ಕ್' ಯೋಜನೆಯನ್ನು ಲೋಕ ಸಭಾ ಪ್ರತಿ ಪಕ್ಷದ ನಾಯಕ ರಾಹುಲ್‍ಗಾಂಧಿ ಅವರು ಶೀಘ್ರದಲ್ಲೇ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ. ಪಾಟೀಲ್ ಅವರು, ಬಳ್ಳಾರಿಯನ್ನು ಕನ್ನಡ ನಾಡಿನ ಟೆಕ್ಸ್‍ಟೈಲ್ ಹಬ್ ಆಗಿಸಲಾಗುತ್ತದೆ. ಈ ಪ್ರಾಜೆಕ್ಟ್‍ನ ಮೂಲ ಆಲೋಚನೆ ರಾಹುಲ್ ಗಾಂಧಿ ಅವರ ದೃಷ್ಟಿಕೋನದಿಂದ ಮೂಡಿ ಬಂದಿದೆ ಎಂದು ತಿಳಿಸಿದ್ದಾರೆ.
ಅಪಾರಲ್ ಪಾರ್ಕ್‍ಗಾಗಿ 158 ಎಕರೆ ಭೂಮಿಯನ್ನು ಈಗಾಗಲೇ ಸ್ವಾಧೀನ ಮಾಡಿಕೊಳ್ಳಲಾಗಿದೆ. ಎರಡನೇ ಹಂತದಲ್ಲಿ 400 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಚಾಲನೆ ನಡೆದಿದೆ. ಅಪಾರಲ್ ಪಾರ್ಕ್ ಪ್ರಾರಂಭವಾದಲ್ಲಿ ಉದ್ಯೋಗಗಳು ಸೃಷ್ಟಿಯಾಗಲಿವೆ. ಬಳ್ಳಾರಿಯ ಖನಿಜ ಉದ್ಯಮಕ್ಕೆ ಪರ್ಯಾಯವಾಗಿ ವಸ್ತ್ರೋದ್ಯಮವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ವಿವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್