ಬಳ್ಳಾರಿ : ಕಟ್ಟಡ ಬಾಡಿಗೆಗೆ ಬೇಕಾಗಿದೆ
ಎಂಜಿನಿಯರಿಂಗ್
ಬಳ್ಳಾರಿ : ಕಟ್ಟಡ ಬಾಡಿಗೆಗೆ ಬೇಕಾಗಿದೆ


ಬಳ್ಳಾರಿ, 21 ನವೆಂಬರ್ (ಹಿ.ಸ.)

ಆ್ಯಂಕರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೆಟ್ರಿಕ್ ನಂತರದ ಎಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳ ಪುರುಷ ಹಾಗೂ ಮಹಿಳಾ 02 ಹೊಸ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು ಹಾಗೂ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆ ನಿಗದಿಪಡಿಸಿದ ಬಾಡಿಗೆಗೆ ಅನುಸಾರವಾಗಿ ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಕಟ್ಟಡ ನೀಡಲು ಇಚ್ಚಿಸುವ ಕಟ್ಟಡದ ಮಾಲೀಕರು ನಗರದ ಕಂಟೋನ್‌ಮೆ0ಟ್ ಪ್ರದೇಶದ ಓ.ಪಿ ಸರ್ಕಲ್, ಎಲ್.ಎಲ್.ಸಿ ಕಾಲೋನಿ ಹತ್ತಿರದ ಡಿಸ್ನಿ ಪಂಕ್ಷನ್ ಹಾಲ್ ಎದುರುಗಡೆಯ 1ನೇ ಮಹಡಿಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-294492 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande