ಅರ್ಥ ಪೂರ್ಣ ಸಂವಿಧಾನ ದಿನಾಚರಣೆ : ಡಾ.ದುರುಗೇಶ ಕೆ ಆರ್
ಗದಗ, 21 ನವೆಂಬರ್ (ಹಿ.ಸ.) : ಆ್ಯಂಕರ್ : ಸಂವಿಧಾನ ದಿನಾಚರಣೆಯನ್ನು ಜಿಲ್ಲೆಯ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲದಲ್ಲಿ ನವೆಂಬರ್ 26 ರಂದು ಅರ್ಥ ಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ ಆರ್ ತಿಳಿಸಿದರು. ಜಿಲ್ಲಾಡಳಿತ ಭವನದ ವಿಡಿಯೋ ಕಾನ್‌ಫರೆನ್ಸ ಹಾಲನಲ್ಲಿಂದು ಜರುಗಿದ ಸಂವಿಧ
ಫೋಟೋ


ಗದಗ, 21 ನವೆಂಬರ್ (ಹಿ.ಸ.) :

ಆ್ಯಂಕರ್ : ಸಂವಿಧಾನ ದಿನಾಚರಣೆಯನ್ನು ಜಿಲ್ಲೆಯ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲದಲ್ಲಿ ನವೆಂಬರ್ 26 ರಂದು ಅರ್ಥ ಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ ಆರ್ ತಿಳಿಸಿದರು.

ಜಿಲ್ಲಾಡಳಿತ ಭವನದ ವಿಡಿಯೋ ಕಾನ್‌ಫರೆನ್ಸ ಹಾಲನಲ್ಲಿಂದು ಜರುಗಿದ ಸಂವಿಧಾನ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂವಿಧಾನ ದಿನಾಚರಣೆ ನಿಮಿತ್ತ ಪ್ರೌಢಶಾಲೆ/ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲಾ/ತಾಲೂಕು ಮಟ್ಟದಲ್ಲಿ ಜಾಥಾ ಕಾರ್ಯಕ್ರಮದಲ್ಲಿ 'ರಾಷ್ಟçಧ್ವಜದ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುವುದು, ವಿವಿಧ ಕನ್ನಪರ ಸಂಘಟನೆಗಳು, ದಲಿತಪರ ಸಂಘಟನೆಗಳು ಮುಖಂಡರು, ಸಂಘ ಸಂಸ್ಥೆಯ ಪಧಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯವರು, ಎನ್.ಸಿ.ಸಿ, ಎನ್.ಎಸ್.ಎಸ್ ವಿಧ್ಯಾರ್ಥಿಗಳ ಸಹಯೋಗದೊಂದಿಗೆ ಹೆಚ್ಚು ಜನರನ್ನು ಸೇರಿಸುವ ಮೂಲಕ ಅಚ್ಚುಕಟ್ಟಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಆಚರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ದಿನಾಂಕ: 26.11.2025 ಬುದುವಾರದಂದು ಜಿಲ್ಲೆಯ ವೀರರಾಣಿ ಕಿತ್ತೂರು ಚೆನ್ನಮ್ಮ ಸರ್ಕಲ್‌ನಿಂದ ಜಿಲ್ಲಾಡಳಿತ ಭವನದವರೆಗೂ ಜಾಥಾ ಕಾರ್ಯಕ್ರಮ ಹಮ್ಮಿಕೂಳ್ಳಲಾಗುವುದು.

ಸಂವಿಧಾನ ದಿನಾಚರಣೆಯ ನಿಮಿತ್ತ ತಾಲೂಕು ಮಟ್ಟದಲ್ಲಿ 'ರಾಷ್ಟçಧ್ವಜದ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುವುದರ ಮೂಲಕ ಜಾಥಾಗಳನ್ನು ಹಮ್ಮಿಕೊಳ್ಳುವುದು. ಸಂವಿಧಾನ ಪುಸ್ತಕಗಳನ್ನು ಡಾ.ಬಿ.ಆರ್. ಅಂಬೇಡ್ಕರ್ ವೇಷ ಭೂಷಣ ಪ್ರದರ್ಶನ ಮಾಡುವುದು, ಜಾಥಾದಲ್ಲಿ ಸಂವಿಧಾನದ ಕುರಿತು ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರಮುಖ ನುಡಿಮುತ್ತು ಪ್ರದರ್ಶಿಸುವುದು. ಜಿಲ್ಲಾ ತಾಲೂಕು ಕೇಂದ್ರದಲ್ಲಿನ ಅಂಬೇಡ್ಕರ್ ಭವನ ಇತರೇ ಸಭಾಭವನದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಕುರಿತು ಉಪನ್ಯಾಸಗಳನ್ನು ನೀಡುವುದರ ಮೂಲಕ ಕಾರ್ಯಕ್ರಮಗಳನ್ನು ಆಯಾ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳಿಗೆ ಆಸಕ್ತಿಯಿಂದ ಆಯೋಜಿಸಿ ಯಶಸ್ವಿಗೂಳಿಸಲು ಅಪರಜಿಲ್ಲಾಧಿಕಾರಿ ಡಾ. ದುರುಗೇಶ ಕೆ ಆರ್ ರವರು ಅರ್ಥ ಪೂರ್ಣವಾಗಿ ಆಚರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.

ಈ ಸಂದರ್ಬದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಮ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಕ್ರಿಡಾಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ, ಪ್ರವಾಸೊದ್ಯಮ ಅಧಿಕಾರಿ ಕೊಟ್ರೇಶ ವಿಬೂತಿ, ದಿಪಿಯು ಮಸನಾಯಕ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಆಧಿಕಾರಿಗಳು, ಎನ್.ಸಿ.ಸಿ, ಎನ್.ಎಸ್.ಎಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande