
ಬೆಂಗಳೂರು, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.
ಸಚಿವರಾದ ಎಚ್. ಕೆ. ಪಾಟೀಲ್, ಕೆ. ಎಚ್. ಮುನಿಯಪ್ಪ, ಶಿವಾನಂದ ಪಾಟೀಲ, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ದೆಹಲಿಯಲ್ಲಿದ್ದು ಆನ್ ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದು, ರಾತ್ರಿ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆ ವಿವರಿಸಿ ನೆರವು ಕೇಳಿರುವುದಾಗಿ ಸಚಿವ ಚಲುವರಾಯಸ್ವಾಮಿಯವರು ಸಭೆಗೆ ವಿವರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa