
ವಿಜಯಪುರ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವ ಮಧುಮೇಹ ದಿನ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಜಿಲ್ಲಾ ಎನ್.ಸಿ.ಡಿ ಘಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉಚಿತ ಮಧುಮೇಹ ತಪಾಸಣೆ ಶಿಬಿರ ಮತ್ತು ಜಾಗೃತಿ ಶಿಬಿರ ನಡೆಯಿತು.
ಈ ಶಿಬಿರವನ್ನು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಜಿಲ್ಲಾ ಎನ್.ಸಿ.ಡಿ ವಿಭಾಗದ ವೈದ್ಯ ಡಾ. ಅಕ್ಷಯ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಪ್ಪಾಸಾಹೇಬ ಇನಾಮದಾರ ಉದ್ಘಾಟಿಸಿದರು.
ಈ ಕಾರ್ಯಕ್ರದಮದಲ್ಲಿ ಮಾತನಾಡಿದ ಜಿಲ್ಲಾ ಎನ್.ಸಿ.ಡಿ ವಿಭಾಗದ ವೈಧ್ಯ ಡಾ. ಅಕ್ಷಯ ಪಾಟೀಲ, ಮಧುಮೇಹ ರೋಗದ ಗುಣಲಕ್ಷಣಗಳು, ನಿರ್ಹವಣೆ, ಮುನ್ನೆಚ್ಚರಿಕೆ ವಿಷಯಗಳ ಕುರಿತು ಮಾಹಿತಿ ನೀಡಿದರು.
ವಿಶ್ವದಲ್ಲಿ ಮಧುಮೇಹ ರೋಗವು 2ನೇಯ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಈ ರೋಗದಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಲಿದೆ. ಈಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ:ಅನು ಕೈಗೊಳ್ಳಬೇಕು. ಅಶಿಸ್ತುಬದ್ಧ ಜೀವನಶೈಲಿ, ಅಸಮತೋಲಿತ ಆಹಾರ ಸೇವನೆ, ದೈಹಿಕ ಚಟುವಟಿಕೆಗಳ ಕೊರತೆ ಹಾಗೂ ದುಶ್ಚಟಗಳು ಮಧುಮೇಹ ರೋಗಕ್ಕೆ ಪ್ರಮುಖ ಕಾರಣವಾಗಿವೆ. ಆದ್ದರಿಂದ ಜೀವನ ಶೈಲಿ ಬದಲಾಯಿಸಿಕೊಂಡು ಹಿತ ಮತ್ತು ಮಿತಚವಾದ ಆಹಾರ ಸೇವನೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಪ್ಪಾಸಾಹೇಬ ಇನಾಮದಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಡಾ. ಸುರೇಶ ಪಾಸ್ಚಾಪುರ, ಡಾ. ಪ್ರೀಯದರ್ಶಿನಿ ಕೆಂಚರೆಡ್ಡಿ ಹಾಗೂ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ರೋಗನಿಧಾನ ವಿಭಾಗದ ಮುಖ್ಯಸ್ಥ ಡಾ. ಸೀತಾ ಬಿರಾದಾರ ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಎನ್.ಸಿ.ಡಿ ಸಿಬ್ಬಂದಿ ವಿಭಾಗ ಮತ್ತು ಬಿ.ಎಲ್.ಡಿ.ಇ ಆಯರ್ವೇದ ಮಹಾವಿದ್ಯಾಲಯದ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ, ಪೋಷಕರು ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande