
ಧಾರವಾಡ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ 23, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa