ಹೊಸಪೇಟೆ : ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ
ಹೊಸಪೇಟೆ, 21 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರಿ ಹಾಸ್ಟೆಲ
ಹೊಸಪೇಟೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ


ಹೊಸಪೇಟೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ


ಹೊಸಪೇಟೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ


ಹೊಸಪೇಟೆ, 21 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರು ಆಗಿರುವ ಮರಡಿ ಜಂಬಯ್ಯನಾಯಕ ಅವರು ಪ್ರತಿಭಟನೆಯ ನೇತೃತ್ವವಹಿಸಿ, ದಿನಾಂಕ : 11.04.2025 ರಂದು ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಹೊರಡಿಸಿರುವ ವೇತನ ಪರಿಷ್ಕರಣೆ ಕರಡು ಅಧಿಸೂಚನೆ (ನೋಟಿಫಿಕೇಷನ್)ಯ ಪ್ರಕಾರ ಕನಿಷ್ಠ ವೇತನ ತಕ್ಷಣ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಹೊರಗುತ್ತಿಗೆ ಪದ್ದತಿಯನ್ನು ತಕ್ಷಣವೇ ರದ್ದುಮಾಡಿ ಸರಕಾರವೇ ನೇರವಾಗಿ ವೇತನ ಪಾವತಿ ಮಾಡಬೇಕು. ವಯೋ ನಿವೃತ್ತಿ 60 ವರ್ಷಕ್ಕೆ ಮಿತಿಗೊಳಿಸಿ, ಎಲ್ಲಾ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸೇವಾ ಭದ್ರತೆ ನೀಡಬೇಕು. ಕಾರ್ಮಿಕ ಇಲಾಖೆಯ ಕಾನೂನುಗಳ ಪ್ರಕಾರ ವಾರದ ರಜೆ, ಇ.ಎಸ್.ಐ, ಐಡಿ ಕಾರ್ಡ್, ಪಿ.ಎಫ್. ವೇತನ ಚೀಟಿ, ಟೆಂಡರ್‍ದಾರರಿಂದ ಸರ್ವಿಸ್ ಸರ್ಟಿಫಿಕೇಟ್, ನೇಮಕಾತಿ ಆದೇಶ ಜಾರಿ ಮಾಡಬೇಕು ಎಂದು ಕೋರಿದರು.

ಬಿ.ಸಿ.ಎಂ. ಇಲಾಖೆಯ ಬಾಲಕರ ಹಾಸ್ಟೆಲ್‍ಗಳಿಗೆ ರಾತ್ರಿ ಕಾವಲುಗಾರರನ್ನು ನೇಮಕ ಮಾಡಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಎಲ್ಲಾ ಇಲಾಖೆಗಳಂತೆ ಸಿಬ್ಬಂದಿಯನ್ನು ಪರಿಗಣಿಸಬೇಕು. ನೇರ ನೇಮಕಾತಿಯಲ್ಲಿ ಕೆಲಸ ಕಳೆದುಕೊಂಡ ಎಲ್ಲಾ ಹೊರಗುತ್ತಿಗೆ ನೌಕರರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ಕರೆದು, ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು.

ಕನ್ನಡ ವಿಶ್ವವಿದ್ಯಾಲಯದಲ್ಲಿ ಕಳೆದ 15-20 ವರ್ಷಗಳಿಂದ ಹೊರಗುತ್ತಿಗೆಯಲ್ಲಿ ದುಡಿಯುತ್ತಿರುವ ಸೆಕ್ಯೂರಿಟಿಗಾರ್ಡ್ ಮತ್ತು ಸ್ವಚ್ಛತಾಗಾರರಿಗೆ, ರಾಜ್ಯ ಸರ್ಕಾರದಿಂದ ಅನುದಾನ ಬಂದಿಲ್ಲವೆಂಬ ಕಾರಣಕ್ಕೆ ಕಳೆದ 13 ತಿಂಗಳುಗಳ ಬಾಕಿ ವೇತನ ಪಾವತಿ ಮಾಡಿಲ್ಲ. ಹೊರಗುತ್ತಿಗೆ ನೌಕರರ ಸಂಕಷ್ಠದ ಬದುಕನ್ನು ಅರ್ಥ ಮಾಡಿಕೊಂಡು, ತಕ್ಷಣ ಅವಶ್ಯಕತೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande