
ಕೊಪ್ಪಳ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ವಿಕಲಚೇತನರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ನೋಂದಣಿ ಪ್ರಾರಂಭವಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ವಿಕಲಚೇತನರಿಗೆ ಕ್ರೀಡಾಕೂಟಯನ್ನು ನವೆಂಬರ್ 24 ರಂದು ಬೆಳ್ಳಿಗೆ 10 ಗಂಟೆಗೆ ಕೊಪ್ಪಳ ತಾಲೂಕು ಕ್ರೀಡಾಂಗಣಯಲ್ಲಿ ಮತ್ತು ಜಿಲ್ಲಾ ಮಟ್ಟದ ವಿಕಲಚೇತನರ ಸಿಟ್ಟಿಂಗ್ ಕ್ರಿಕೆಟ್‌ನ್ನು ನ. 27 ರಂದು ಬೆಳಿಗ್ಗೆ 10 ಗಂಟೆಗೆ ಗಂಗಾವತಿಯ ಎಪಿಎಂಸಿ ಮೈದಾನದ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಜಿಲ್ಲೆಯ ಏಳು ತಾಲೂಕುಗಳ ವಿಕಲಚೇತನರು ಭಾಗವಹಿಸಬೇಕು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು ನ. 25 ರೊಳಗಾಗಿ ಕ್ರೀಡಾ ಸಮಿತಿಯ ದೂರವಾಣಿ ಸಂಖೆ 7353402122 ಮತ್ತು 9035859684 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್