
ಹೊಸಪೇಟೆ, 22 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಗೌರವಧನದ ಅಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗೆ ಕಾರ್ಯನಿರ್ವಹಿಸಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಖಾಲಿಯಿರುವ ಹುದ್ದೆಗಳು ಯೋಜನಾ ನಿರ್ದೇಶಕರು (1), ಕ್ಲರ್ಕ್ ಕಂ ಅಕೌಂಟೆಂಟ್ (1), ಕಚೇರಿ ಜವಾನರು (1) ಈ ಹುದ್ದೆಗಳಿಗೆ ಅಭ್ಯರ್ಥಿಗಳು ಸ್ವವಿವರವುಳ್ಳ ಅರ್ಜಿಯನ್ನು ಭಾವಚಿತ್ರ ಮತ್ತು ನಿಗಧಿತ ದಾಖಲೆಗಳೊಂದಿಗೆ ನವೆಂಬರ್.30 ರ ಸಂಜೆ 5:30 ರೊಳಗಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನೆ ಕಾರ್ಮಿಕ ಅಧಿಕಾರಿಗಳ ಕಾರ್ಯಾಲಯ, ಗವಿಸಿದ್ದೇಶ್ವರ ನಗರದ ರಿಲಾಯನ್ಸ್ ಟವರ್ ಹತ್ತಿರ, ಹೊಸಪೇಟೆ ವಿಜಯನಗರ ಜಿಲ್ಲೆ ಇವರಿಗೆ ಸಲ್ಲಿಸಬೇಕು.
ವಿದ್ಯಾರ್ಹತೆ ಮತ್ತು ಅನುಭವ : ಯೋಜನಾ ನಿರ್ದೇಶಕರ ಹುದ್ದೆಗೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್.ಡಬ್ಲೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ (ಎನ್‍ಜಿಒ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಕುರಿತು 5 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಅವಶ್ಯಕ. 40 ವಯೋಮಾನ ಮೀರಿರಬಾರದು. ಕಚೇರಿ ಲೆಕ್ಕ ಪತ್ರಗಳನ್ನು ಅರಿತಿರಬೇಕು.
ಕ್ಲರ್ಕ್ ಕಂ ಅಕೌಟೆಂಟ್ ಹುದ್ದೆಗೆ ಬಿಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವಲ್ಲಿ, ಅಕೌಟೆಂಟ್ ಹುದ್ದೆಯಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ರಿಜಿಸ್ಟರ್‍ಗಳ ಕುರಿತು ಮಾಹಿತಿಯನ್ನು ಹಾಗೂ ಯೋಜನೆಯ ಕ್ಯಾಷ್ ಬುಕ್‍ಗಳನ್ನು ನಿರ್ವಹಿಸುವ ಸಾಮಥ್ರ್ಯವನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ. ಟ್ಯಾಲಿ ಸಾಫ್ಟವೇರ್‍ನ್ನು ಉಪಯೋಗಿಸುವ ಜ್ಞಾನ ಮತ್ತು ಕೌಶಲ್ಯ ಹೊಂದಿರಬೇಕು. 40 ವಯೋಮಾನ ಮೀರಿರಬಾರದು.
ಕಚೇರಿ ಜವಾನ ಹುದ್ದೆಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಕಚೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ನಿರ್ವಹಿಸಿದ ಅನುಭವ ಹೊಂದಿರಬೇಕು. ಓದಲು ಬರೆಯಲು ಕಡ್ಡಾಯವಾಗಿ ಬರಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್