ಮುಳಬಾಗಿಲು ತಾಲ್ಲೂಕು ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲೂಕು ಸಮಾವೇಶ
ಮುಳಬಾಗಿಲು ತಾಲ್ಲೂಕು ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲೂಕು ಸಮಾವೇಶ
ಚಿತ್ರ : ಮುಳಬಾಗಿಲು ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲೂಕು ಸಮಾವೇಶ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರಿನಾರಾಯಣ ಉದ್ಘಾಟಿಸಿ ಮಾತನಾಡಿದರು.


ಕೋಲಾರ, ೨೨ ನವಂಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳಿಂದ ರೈತಾಪಿ ವರ್ಗ ತೀವ್ರ ಸಂಕಷ್ಟದಲ್ಲಿದ್ದು ೩೦ ವರ್ಷಗಳಲ್ಲಿ ದೇಶದಲ್ಲಿ ೬.೫ ಲಕ್ಷ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರಿನಾರಾಯಣ ತಿಳಿಸಿದರು.

ಮುಳಬಾಗಿಲು ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲೂಕು ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ರೈತ ದೇಶಕ್ಕೆ ಅನ್ನ ನೀಡುವ ಅನ್ನದಾತರು ಅಗಲಿಸಿದಳು ತನ್ನ ಮತ್ತು ದೇಶದ ಜನರ ಬದುಕಿಗಾಗಿ ರಕ್ತ ಬೆವರು ಸುರಿಸಿ ದುಡಿಯುವವರು. ಇಂತಹ ರೈತರ ಪರಿಸ್ಥಿತಿ ಅತ್ಯಂತ ಸಂಕಷಟದಲ್ಲಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಕೇಂದ್ರ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕಾರ್ಪೊರೇಟರ್ ಸಂಸ್ಥೆಗಳ ಹಿತಾಸಕ್ತಿಗಾಗಿ ರೈತರ ವಿರೋಧದ ನಡುವೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರಗಳ ಮೂಲಕ ಜಾರಿಗೊಳಿಸುತ್ತಿದೆ ಎಂದರು.

ರಾಜ್ಯ ಹಿರಿಯ ರೈತ ಮುಖಂಡ ಎಂ.ಗೋಪಾಲ್ ಮಾತನಾಡಿ, ಕೋಲಾರ ಜಿಲ್ಲೆಗೆ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಹಲವಾರು ವರ್ಷಗಳಿಂದ ರೈತರು ಸಾಗುವಳಿ ಮಾಡಿಕೊಂಡು ಜೀವನ ಮಾಡುತ್ತಿದ್ದ ಅರಣ್ಯ ಅಧಿಕಾರಿಗಳು ವಿನಾಕಾರಣ ಅವರ ಜಮೀನುಗಳನ್ನು ವಶಪಡಿಸಿಕೊಂಡು ಸರಿಯಲ್ಲ. ರೈತ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದು ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಮುಖಂಡ ಪುಣ್ಯಹಳ್ಳಿ ಶಂಕರ್ ಮಾತನಾಡಿ, ಬಗರ್ ಹುಕುಂ ಸಾಗುವಳಿ ಸಕ್ರಮ ೫೩-೫೭ ಅರ್ಜಿ ಹಾಕಿರುವ ರೈತರಿಗೆ ಕೂಡಲೇ ಭೂ ಮಂಜೂರಾತಿ ಪತ್ರ ವಿತರಣೆ ಮಾಡಬೇಕು. ಹಲವಾರು ವರ್ಷಗಳಿಂದ ಪಿ.ನಂಬರ್ ದುರಸ್ತಿಗಾಗಿ ರೈತರು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದು. ತಹಸೀಲ್ದಾರ್ ಕೂಡಲೇ ಪಿ.ನಂಬರ್ ದುರಸ್ತಿ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಹಿರಿಯ ಮುಖಂಡ ಟಿ.ಎಸ್ ರಮೇಶ್, ದೂಲುಪಲ್ಲಿ ರಾಮಚಂದ್ರಪ್ಪ. ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್. ಪ್ರಧಾನ ಕಾರ್ಯದರ್ಶಿ ಪಾತುಕೋಟೆ ನವೀನ್ ಕುಮಾರ್. ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಭಾಗ್ಯಮ್ಮ. ವಕೀಲರಾದ ದಶರಥ್, ವೆಂಕಟೇಶ್, ಸಂಗಸಂದ್ರ ರಾಮಚಂದ್ರಪ್ಪ. ರೈತ ನಾಯಕರಾದ ಕೇರಳ ಶ್ರೀನಿವಾಸ್, ಕೊಡಹಳ್ಳಿ ಶ್ರೀನಿವಾಸ್, ವಿದ್ಯಾರ್ಥಿ ನಾಯಕರಾದ ಬಿ.ರಾಜ್, ಶಶಿಕುಮಾರ್, ವಿನಿತ್ ಪ್ರಿಯಾ, ರಶ್ಮಿ, ಮಾರಪ್ಪ ಮತ್ತಿತರರು ಹಾಜರಿದ್ದರು.

ಚಿತ್ರ : ಮುಳಬಾಗಿಲು ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲೂಕು ಸಮಾವೇಶ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರಿನಾರಾಯಣ ಉದ್ಘಾಟಿಸಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande