ಪಠ್ಯದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆ ಅವಶ್ಯ : ಕರ್ಣಕುಮಾರ
ಕೊಪ್ಪಳ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಪಠ್ಯದ ಜೊತೆಗೆ ಸರ್ವಾಂಗೀಣ ವಿಕಾಸಕ್ಕೆ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳು ಅವಶ್ಯವಾಗಿವೆ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಹೇಳಿದ್ದಾರೆ. ಕಾರಟಗಿಯ ಶ್ರೀ ಶರಣಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ಕ
Along with academics, cultural activities are essential for all-round development: Karnakumar


Along with academics, cultural activities are essential for all-round development: Karnakumar


Along with academics, cultural activities are essential for all-round development: Karnakumar


ಕೊಪ್ಪಳ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಪಠ್ಯದ ಜೊತೆಗೆ ಸರ್ವಾಂಗೀಣ ವಿಕಾಸಕ್ಕೆ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳು ಅವಶ್ಯವಾಗಿವೆ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಹೇಳಿದ್ದಾರೆ.

ಕಾರಟಗಿಯ ಶ್ರೀ ಶರಣಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ``ಚಿಗುರು'' `ಇದು ಬಾಲ ಪ್ರತಿಭೆಗಳ ಸಾಂಸ್ಕೃತಿಕ ವೇದಿಕೆ' ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾಗದೆ ಸೃಜನಶೀಲ ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನಹರಿಸಬೇಕು ಅಂದಾಗ ಮಾತ್ರ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಯುವ ಸೌರಭ, ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಚಿಗುರು ಕಲಾ ಪ್ರತಿಭೋತ್ಸವ, ಕಲಾ ತರಬೇತಿ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಇಲಾಖೆ ಈ ನಾಡಿನ ಭಾಷೆ, ಕಲೆ ಸಂಸ್ಕೃತಿ ಮತ್ತು ಪರಂಪರೆಯನ್ನು ಜೀವಂತವಾಗಿಸಿದೆ ಎಂದರು‌.

ಇಂದಿನ ದಿನಗಳಲ್ಲಿ ನಾವುಗಳು ಸಾಮನ್ಯವಾಗಿ ಪಾಶ್ಚಿಮತ್ಯ ಸಂಸ್ಕೃತಿಗೆ ತಲೆಬಾಗುತ್ತಿದ್ದೇವೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಯಾವುದೇ ಇತಿಹಾಸವಿಲ್ಲ. ಈ ನಾಡಿನ ಸಂಸ್ಕೃತಿಗೆ ಅಮೋಘವಾದ ಇತಿಹಾಸವಿದೆ. ಹಾಗಾಗಿ ನಾವೆಲ್ಲರೂ ದೇಶೀಯ ಗ್ರಾಮೀಣ ಜನಪದ ಸಾಹಿತ್ಯ ಪರಂಪರೆಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಸ್.ಬಿ.ಶೆಟ್ಟರ್ ಅವರು ಮಾತನಾಡಿ, ಈ ನಾಡಿನ ಕಲೆ ಸಂಸ್ಕೃತಿ ಸಾಹಿತ್ಯ ಹಿರಿದಾಗಿದೆ ಹಾಗೂ ಬದುಕಿಗೆ ಬೇಕಾದ ಮಾನವೀಯತೆಯ ಮೌಲ್ಯ, ನೈತಿಕ ಬೆಳವಣಿಗೆ ಮತ್ತು ದೈಹಿಕ ವಿಕಾಸಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು

ಇಂದಿನ ದಿನಗಳಲ್ಲಿ ಮಕ್ಕಳಿಗೆ ತುಂಬಾ ಅವಶ್ಯಕವಾಗಿವೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶರಣಪ್ಪ ಕೋಟ್ಯಾಳ ಅವರು ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನೇಕ ಕಾರ್ಯಕ್ರಮಗಳ ಮೂಲಕ ಈ ನಾಡಿನ ಭಾಷೆ, ಕಲೆ, ಸಂಸ್ಕೃತಿಯನ್ನು ಹಿರಿದಾಗಿಸಿದೆ ಎಂದು ಹೇಳಿದರು.

ತಾಲೂಕು ನೌಕರ ಸಂಘದ ಅಧ್ಯಕ್ಷರಾದ ಹನುಮಂತಪ್ಪ ನಾಯಕ್ ಅವರು ಮಾತನಾಡಿ, ಕನ್ನಡ ನಾಡು, ನುಡಿ, ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಕ್ಕಳಿಗೆ ಈ ಶ್ರೀಮಂತ ಪರಂಪರೆಯ ಅರಿವು ಮೂಡಿಸುವ ಕೆಲಸ ವಾಗಬೇಕು. ಈ ನಿಟ್ಟಿನಲ್ಲಿ ಈ ಚಿಗುರು ಕಾರ್ಯಕ್ರಮ ಬಾಲ ಪ್ರತಿಭೆಗಳಿಗೆ ಅತ್ಯುತ್ತಮ ವೇದಿಕೆಯಾಗಿದೆ. ಮಕ್ಕಳು ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಇಂತಹ ಕಾರ್ಯಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಕಾರಟಗಿ ಪುರಸಭೆ ಅಧ್ಯಕ್ಷರಾದ ರೇಖಾ ರಾಜೇಶೇಖರ ಆನೆ ಹೊಸರು ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಚಂದ್ರಶೇಖರ್ ಅವರಾದಿ, ಮಲ್ಲಿಕಾರ್ಜುನ್ ಕೊಟಗಿ, ಶಿವಕುಮಾರ್ ದಿವಟರ

ಹಾಗೂ ಅಂಬರೀಶ್ ಪಾಟೀಲ್, ಚಂದ್ರಶೇಖರ ಸೋಮಲಾಪುರ, ಕರ್ನಾಟಕ ಜನಪದ ಅಕಾಡೆಮಿ ಸದಸ್ಯರಾದ ಮೈಬೂಬ ಕಿಲ್ಲೆದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಈ ಕಾರ್ಯಕ್ರಮವು ಬಾಲ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಯಿತು.

ಸಾಂಸ್ಕೃತಿಕ ಕಾರ್ಯಕ್ರಮ:* ಬಾಲಪ್ರತಿಭೆ ವೈಷ್ಣವಿ ಕಮ್ಮಾರ್ ಮತ್ತು ತಂಡ ಪ್ರಸ್ತುತಪಡಿಸಿದ ಸುಗಮ ಸಂಗೀತ ಗಾಯನ ಪ್ರೇಕ್ಷಕರನ್ನು ರಂಜಿಸಿತು. ‘ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ’ ಹಾಡಿಗೆ ನೆರೆದಿದ್ದವರು ತಲೆದೂಗಿದರು.

ನಯನ ಮತ್ತು ತಂಡದವರು ಜಾನಪದ ನೃತ್ಯ ಮಲೆ ಮಾದೇಶ್ವರ ಕುರಿತು ಹೆಜ್ಜೆ ಹಾಕಿ ಸಂಭ್ರಮಿಸಿದರು. ಅಮಿತ್ ಮತ್ತು ತಂಡದವರು ಶಾಸ್ತ್ರೀಯ ಸಂಗೀತ, ಅಸರ ಜರಿನ್ ತಂಡದವರಿಂದ ಲವಕುಶರ ಕಾಳಗ ಬಯಲಾಟ ಪ್ರದರ್ಶಿಸಿದರು. ಏಕಪಾತ್ರ ಅಭಿನಯ ಮತ್ತು ಸಮೂಹ ನೃತ್ಯ ರಂಗು ನೀಡಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande