
ಕೋಲಾರ, ೨೨ ನವಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿವರಿಸಿದರು.
ಕಾಂಗ್ರೆಸ್ ಪಕ್ಷದ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್ ಮಾತನಾಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿ ಮೂಲಕ ಕೆರೆಗಳಿಗೆ ನೀರು ಹರಿಸಿದ ಅಧುನಿಕ ಭಗೀರಥರಾಗಿದ್ದಾರೆ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಗೆ ಎಂಆರ್ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್, ತಾಯಿ ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡ ಸೇರಿದಂತೆ ಸೌಲಭ್ಯಗಳನ್ನು ನೀಡಿ ಬಡವರಿಗೆ ಅನುಕೂಲ ಮಾಡಿದ್ದಾರೆ ಅದರಿಂದಾಗಿ ಅವರ ಹುಟ್ಟುಹಬ್ಬವನ್ನು ಇದೇ ಆಸ್ಪತ್ರೆಯಲ್ಲಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಸದಾ ರೈತರ ಬಗ್ಗೆ ಹಾಗೂ ರಾಜ್ಯದ ಜನರ ಹಿತಕ್ಕಾಗಿ ದುಡಿಯುವ ರಮೇಶ್ ಕುಮಾರ್ ಅವರು ಕಾರ್ಯಕರ್ತರಿಗೆ ಆದರ್ಶವಾಗಿದ್ದಾರೆ ಮುಂದೆ ಅವರಿಗೆ ಒಳ್ಳೆಯ ರಾಜಕೀಯ ಸ್ಥಾನಮಾನಗಳು ದೊರೆಯುವಂತೆ ದೇವರು ಅವರಿಗೆ ಕರುಣಿಸಲಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಜಗದೀಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೆಡಿಪಿ ಸದಸ್ಯ ಮಣಿಘಟ್ಟ ಸೊಣ್ಣೇಗೌಡ, ನಗರಸಭೆ ಸದಸ್ಯರಾದ ಅಲ್ತಾಫ್, ಕಠಾರಿಪಾಳ್ಯ ಅಮರನಾಥ್, ಗಂಗಮ್ಮನಪಾಳ್ಯ ರಾಮಯ್ಯ, ಮುಖಂಡರಾದ ಖಯ್ಯಾಮ್, ಗಂಗಣ್ಣ, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಕೋಟೆ ಶ್ರೀನಿವಾಸ್, ಬಾಲು, ಭರತ್, ನವೀನ್, ವಾಸು, ಪಿಳ್ಳಪ್ಪ, ಬೈರಂಡಹಳ್ಳಿ ನಾಗೇಶ್, ಕಲ್ಲಮಂಜಲಿ ರವಿ, ಸಂಪತ್, ಅವಣಿ ಮಂಜು, ಮುಂತಾದವರು ಇದ್ದರು.
ಚಿತ್ರ ; ಮಾಜಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೋಲಾರ ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿವರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್