ಮಹಾರಾಷ್ಟ್ರದ ಅಂಬರ್ನಾಥ್‌ನಲ್ಲಿ ಕಾರು ಉರುಳಿ ಬಿದ್ದು ನಾಲ್ವರ ಸಾವು
ಮುಂಬಯಿ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ನಾಥ್‌ನಲ್ಲಿ ತಡ ರಾತ್ರಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ. ಕಾರು ವೇಗವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು
Accident


ಮುಂಬಯಿ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ನಾಥ್‌ನಲ್ಲಿ ತಡ ರಾತ್ರಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ. ಕಾರು ವೇಗವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಚಾಲಕ ಶಿಂಧೆ, ಚಂದ್ರಕಾಂತ್ ಅನಾರ್ಕೆ (57), ಶೈಲೇಶ್ ಜಾಧವ್ (45) ಮತ್ತು ಸುಮಿತ್ ಚೆಲಾನಿ (17) ಮೃತಪಟ್ಟಿದ್ದಾರೆ. ಗಾಯಗೊಂಡ ಅಭ್ಯರ್ಥಿ ಕಿರಣ್ ಚೌಬೆ ಸೇರಿದಂತೆ ಮೂವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಅಂಬರ್ನಾಥ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande