
ಬಳ್ಳಾರಿ, 22 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಬೊಬ್ಬಕುಂಟೆ ಬೈಪಾಸ್ ಬಳಿ ಶನಿವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಲಾರಿ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ಕಾರಣ ಬಂಡಿ ಚಾಲಕ ಮತ್ತು ಎರಡು ಎತ್ತುಗಳು ಮೃತಪಟ್ಟಿವೆ.
ಮೃತರು ಚರಕುಂಟೆ ಗ್ರಾಮ ನಿವಾಸಿ ದಾದಾ (33) ಸ್ಥಳದಲ್ಲೇ ಮೃತಪಟ್ಟಿದ್ದು, ಹೊನ್ನೂರುಸಾಬ್ (26) ಅವರು ತೀವ್ರವಾಗಿ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಧ್ರ ನೋಂದಣಿಯ ಲಾರಿಯನ್ನು ಚಾಲಕನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್