ನ.26 ಜಿಲ್ಲಾದ್ಯಾಂತ ಸಂವಿಧಾನ ದಿನ ಆಚರಣೆ.
ಹೊಸಪೇಟೆ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನವೆಂಬರ್ 26 ರಂದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಹೊಸಪೇಟೆ ಜಿಲ್ಲಾ ಕೇಂದ್ರದಲ್ಲಿ ನ.26 ರಂದು ಸಂವಿಧಾನ ದಿನಾಚರಣೆ ಅಂಗವಾಗಿ ಡಾ
ನ.26 ಜಿಲ್ಲಾದ್ಯಾಂತ ಸಂವಿಧಾನ ದಿನ ಆಚರಣೆ.


ಹೊಸಪೇಟೆ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನವೆಂಬರ್ 26 ರಂದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಹೊಸಪೇಟೆ ಜಿಲ್ಲಾ ಕೇಂದ್ರದಲ್ಲಿ ನ.26 ರಂದು ಸಂವಿಧಾನ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಹಾಗೂ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

ಜಾಗೃತಿ ಜಾಥಾವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ವಿಜಯನಗರ ಕಾಲೇಜು ಮುಂಭಾಗದಿಂದ ಜಿಲ್ಲಾ ಒಳಾಂಗಣ ಕ್ರೀಡಾಂಗಣವರೆಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande