
ಜೋಹಾನ್ಸ್‌ಬರ್ಗ್, 22 ನವೆಂಬರ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಆಫ್ರಿಕಾ ಭೇಟಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜೋಹಾನ್ಸ್‌ಬರ್ಗ್‌ನಲ್ಲಿ ಭಾರತೀಯ ಮೂಲದ ತಂತ್ರಜ್ಞಾನ ಉದ್ಯಮಿಗಳೊಂದಿಗೆ ಫಲಪ್ರದ ಸಂವಾದ ನಡೆಸಿದರು.
ಫಿನ್‌ಟೆಕ್, ಸಾಮಾಜಿಕ ಮಾಧ್ಯಮ ವೇದಿಕೆಗಳು, ಕೃಷಿ ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ರಕ್ಷಣೆ, ವೈದ್ಯಕೀಯ ಸಾಧನಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸಮುದಾಯದ ಯುವ ಉದ್ಯಮಿಗಳು ನಡೆಸುತ್ತಿರುವ ನವೀನ ಕಾರ್ಯಗಳನ್ನು ಪ್ರಧಾನಿ ಶ್ಲಾಘಿಸಿದರು.
ಈ ವೇಳೆ ಮಾತನಾಡಿದ ಮೋದಿ, “ಭಾರತ ಮತ್ತು ಭಾರತೀಯ ಮೂಲದ ಜಾಗತಿಕ ಉದ್ಯಮಿಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸಬೇಕಿದೆ. ನಮ್ಮ ಜನರೊಂದಿಗೆ ನಿಕಟವಾಗಿ ಕೆಲಸ ಮಾಡಿ, ಪರಸ್ಪರ ಅಭಿವೃದ್ಧಿಗೆ ಕೈ ಜೋಡಿಸಬೇಕು” ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa