
ರಾಯಚೂರು, 22 ನವೆಂಬರ್ (ಹಿ.ಸ.) :
ಆ್ಯಂಕರ್ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ನವೆಂಬರ್ 23ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನವೆಂಬರ್ 23ರ ಬೆಳಿಗ್ಗೆ 10.30ಕ್ಕೆ ರಾಯಚೂರು ನಗರದಿಂದ ನಿರ್ಗಮಿಸಿ ಮಧ್ಯಾಹ್ನ 12 ಗಂಟೆಗೆ ಕವಿತಾಳಗೆ ತೆರಳಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 2 ಗಂಟೆಗೆ ಕವಿತಾಳದಿಂದ ನಿರ್ಗಮಿಸಿ ರಾಯಚೂರು ನಗರಕ್ಕೆ ಆಗಮಿಸಿ ಸಂಜೆ 4 ಗಂಟೆಗೆ ನಡೆಯುವ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಬಳಿಕ ರಾತ್ರಿ 9.40ಕ್ಕೆ ರಾಯಚೂರಿನಿಂದ ಎಸ್.ಬಿ.ಸಿ. ರಾಜಧಾನಿ ಎಕ್ಸಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್