ಕ್ರೀಡೆಗಳಿಂದ ನಾಯಕತ್ವದ ಮಹತ್ವ ತಿಳಿಯಲಿದೆ : ವರ್ತಿಕಾ ಕಟೀಯಾರ
ಬಳ್ಳಾರಿ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಪೊಲೀಸ್ ಇಲಾಖೆ ಶಿಸ್ತಿಗೆ ಹೆಸರುವಾಸಿಗಿದ್ದು ಶಿಸ್ತಿಗೆ ಕ್ರೀಡೆ ಪೂರಕ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕಿ ವರ್ತಿಕಾ ಕಟೀಯಾರ ಅವರು ತಿಳಿಸಿದ್ದಾರೆ. ಬಳ್ಳಾರಿಯ ಡಿಎಆರ್ ಕವಾಯತು ಮೈದಾನದಲ್ಲಿ ನಡೆದ ಬಳ್ಳಾರಿ ಜಿಲ್ಲ
ಕ್ರೀಡೆಗಳಿಂದ ನಾಯಕತ್ವದ ಮಹತ್ವ ತಿಳಿಯಲಿದೆ: ವರ್ತಿಕಾ ಕಟೀಯಾರ

ಬಳ್ಳಾರಿ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಪೊಲೀಸ್ ಇಲಾಖೆ ಶಿಸ್ತಿಗೆ ಹೆಸರುವಾಸಿಗಿದ್ದು ಶಿಸ್ತಿಗೆ ಕ್ರೀಡೆ ಪೂರಕ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕಿ ವರ್ತಿಕಾ ಕಟೀಯಾರ ಅವರು ತಿಳಿಸಿದ್ದಾರೆ.

ಬಳ್ಳಾರಿಯ ಡಿಎಆರ್ ಕವಾಯತು ಮೈದಾನದಲ್ಲಿ ನಡೆದ ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025ರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,

ದೈನಂದಿನ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಲು ಕ್ರೀಡೆಗಳು ಮತ್ತು ಕ್ರೀಡಾಮನೋಭಾವ ಪೂರಕವಾಗಿವೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನಾಯಕತ್ವ, ಸಾಮೂಹಿಕ ಪ್ರಯತ್ನ ಮತ್ತು ಟೀಂ ವರ್ಕ್‍ನ ಅಗತ್ಯಗಳು ಅರಿವಿಗೆ ಬರುತ್ತವೆ. ಕಾರಣ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಟೈಮ್ ಮ್ಯಾನೇಜ್ಮೆಂಟ್ ಪೊಲೀಸ್ ವೃತ್ತಿ ಜೀವನದಲ್ಲಿ ಮುಖ್ಯ. ಜಿಲ್ಲೆಯಲ್ಲಿ ನಡೆದ ಹಬ್ಬ ಹರಿ ದಿನಗಳಲ್ಲಿ ರಜೆ ತೆಗೆದುಕೊಳ್ಳದೇ ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ನಿಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ಮಾಡಿದ್ದೀರಿ. ಮೂರು ದಿನಗಳಲ್ಲಿ ಶಿಸ್ತು ಮತ್ತು ಸಂಯಮಗಳಿಂದ ಕೂಡಿದ್ದ ಕ್ರೀಡಾಕೂಟವನ್ನು ನಡೆಸಿದ್ದೀರಿ ಎಂದರು.

ಎಸ್ಪಿ ಡಾ. ಶೋಭಾರಾಣಿ ವಿ.ಜೆ ಅವರು, ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದೀರಿ. ಹೀಗೆ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ಎಂದರು.

ಕಾರ್ಯಕ್ರಮಕ್ಕೂ ಮುನ್ನ 6 ತಂಡಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ಪೊಲೀಸ್ ಸಿಬ್ಬಂದಿ ಪೊಲೀಸ್ ದ್ವಜವನ್ನು ಹಸ್ತಾಂತಿಸಿದರು. ಕ್ರೀಡೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

 rajesh pande