ಕಬ್ಬಿನ ಗ್ಯಾಂಗ್ ಮೇಲೆ ಕಣ್ಣಿಟ್ಟ ಪೊಲೀಸ ಇಲಾಖೆ
ವಿಜಯಪುರ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ರೈಂಗಳು ಆಗುತ್ತವೆ. ಈ ಹಿನ್ನೆಲೆ ವಿಜಯಪುರ ಜಿಲ್ಲಾ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಇದೀಗ ಕಬ್
ಪೊಲೀಸ


ವಿಜಯಪುರ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ರೈಂಗಳು ಆಗುತ್ತವೆ. ಈ ಹಿನ್ನೆಲೆ ವಿಜಯಪುರ ಜಿಲ್ಲಾ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಇದೀಗ ಕಬ್ಬು ಕಟಾವ್ ಆರಂಭವಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಕಬ್ಬು ಕಟಾವ್ ಮಾಡಲು ವ್ಯಕ್ತಿಗಳು ಬರುತ್ತಾರೆ. ಅದಕ್ಕಾಗಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಪೊಲೀಸರು ಸಭೆ ನಡೆಸಿ, ಕಬ್ಬು ಕಟಾವ್ ಮಾಡುವವರ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ಇನ್ನೂ ರಾತ್ರಿ ಸಮಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ ಬೀಟ್ ವ್ಯವಸ್ಥೆ ಮಾಡಲಾಗಿದೆ. ‌ರಾತ್ರಿ ವೇಳೆ ಸುಖಾಸುಮ್ಮನೆ ಸಾರ್ವಜನಿಕರು ಓಡಾಟ ಮಾಡಬಾರದು ಎಂದು ಸಂದೇಶ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande