ಸಾರಿಗೆ ಇಲಾಖೆ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ
ಬಳ್ಳಾರಿ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ/ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿಎಸ್‌ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಪಾವತಿದಾರರಿಗೆ ಡಿಸೆಂಬರ್ 12 ರವರೆಗೆ
ಸಾರಿಗೆ ಇಲಾಖೆ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ


ಬಳ್ಳಾರಿ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ/ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿಎಸ್‌ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.

ಪಾವತಿದಾರರಿಗೆ ಡಿಸೆಂಬರ್ 12 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಾಹನ ಮಾಲೀಕರು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸಗಿರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande