
ವಿಜಯಪುರ, 22 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್. ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯದ ಬಿಬಿಎ ವಿಭಾಗದ ಇಬ್ಬರು ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಟಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಯೋಗೇಶ ಪಂಡಿತ ಮತ್ತು ವೇದಾಂತ ಜಾಧವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಟಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಗೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರು, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಇಬ್ಬರೂ ಕ್ರೀಡಾಪಟುಗಳ ಸಾಧನೆ ಕಾಲೇಜು, ಬಿ.ಎಲ್.ಡಿ.ಇ ಸಂಸ್ಥೆ ಮತ್ತು ವಿಜಯಪುರ ಜಿಲ್ಲೆಗೆ ಹೆಮ್ಮೆ ತಂದಿದೆ. ಕ್ರೀಡಾ ಜೀವನದಲ್ಲಿ ಅವರು ಇನ್ನೂ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande