ಎರಡು ದಿನಗಳ ತರಬೇತಿ ಕಾರ್ಯಕ್ರಮ
ಚಿತ್ರದುರ್ಗ, 23 ನವೆಂಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಬಬ್ಬೂರುಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಡಿಸೆಂಬರ್ 8 ಮತ್ತು 9ರಂದು “ಆರೋಗ್ಯಕರ ಹಾಲಿನ ಉತ್ಪನ್ನಗಳು, ಗೃಹ ಅಲಂಕಾರಿಕ ವಸ್ತುಗಳು ಹಾಗೂ ಆದಾಯೋತ್ಪನ್ನ ವಸ್ತುಗಳ ತಯಾರಿಕೆ ಕುರಿತು ಎರಡು ದಿನಗಳ ತರಬೇತ
ಎರಡು ದಿನಗಳ ತರಬೇತಿ ಕಾರ್ಯಕ್ರಮ


ಚಿತ್ರದುರ್ಗ, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಬಬ್ಬೂರುಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಡಿಸೆಂಬರ್ 8 ಮತ್ತು 9ರಂದು “ಆರೋಗ್ಯಕರ ಹಾಲಿನ ಉತ್ಪನ್ನಗಳು, ಗೃಹ ಅಲಂಕಾರಿಕ ವಸ್ತುಗಳು ಹಾಗೂ ಆದಾಯೋತ್ಪನ್ನ ವಸ್ತುಗಳ ತಯಾರಿಕೆ ಕುರಿತು ಎರಡು ದಿನಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ತರಬೇತಿಯಲ್ಲಿ ಭಾಗವಹಿಸುವ ಇಚ್ಛೆವುಳ್ಳವರು ತರಬೇತಿ ಶುಲ್ಕ ಒಟ್ಟು ರೂ.500/ಗಳನ್ನು ಪಾವತಿಸಿ, ಡಿ. 06 ರೊಳಗೆ ದೂರವಾಣಿ ಸಂಖ್ಯೆ 9986647124 ಮೂಲಕ ಅಥವಾ ಹಿರಿಯೂರಿನ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ.ಜೆ.ಎಂ.ಸರಸ್ವತಿ ಅವರ ಕಛೇರಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ಮೊದಲು ನೋಂದಾಯಿಸಿಕೊಂಡವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಶಿಬಿರಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ಕಲ್ಪಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಿರಿಯೂರಿನ ಬಬ್ಬೂರುಫಾರಂ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ.ಜೆ.ಎಂ.ಸರಸ್ವತಿ ಅವರ ದೂರವಾಣಿ ಸಂಖ್ಯೆ 9986647124 ಗೆ ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande