
ಗದಗ, 23 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್, ಕೇಂದ್ರಗಳ ಮುಖಾಂತರ ಆನ್‌ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಯಡಿ ಆನ್ ಲೈನ್ ಮತ್ತು ಆಪ್ ಲೈನ್ ಎರಡರಲ್ಲು ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಫ್‌ಲೈನ್ ಅರ್ಜಿಗಳನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೇಲ್ಕಾಣಿಸಿದ ಯೋಜನೆಗಳಡಿ ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳು.: ಆಧಾರ್ ಕಾರ್ಡ, ಆಧಾರ್ ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆ ಪುಸ್ತಕ, ಯೋಜನಾ ವರದಿ, ಜಾತಿ & ಆದಾಯ,ಚೇತನ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳಡಿ ಸಂಸ್ಥೆಯಲ್ಲಿ ನೊಂದಣಿಯಾಗಿರುವ ಪ್ರಮಾಣ ಪತ್ರ.ದೇವದಾಸಿ ಮಹಿಳೆಯರು 1993-94/2007-08 ರಲ್ಲಿ ಸರ್ಕಾರದಿಂದ ನಡೆಸಿದ ಸಮೀಕ್ಷೆಯಲ್ಲಿ ಪಡೆದ ಪ್ರಮಾಣ ಪತ್ರ.
ವಯಸ್ಸಿನ ಮಿತಿ: ಧನಶ್ರೀ ಯೋಜನೆ- 18-60 ವರ್ಷಗಳು, ಚೇತನ ಯೋಜನೆ- 18 ವರ್ಷ ಮೆಲ್ಪಟ್ಟು, ಉದ್ಯೋಗಿನಿ ಯೋಜನೆ- 18-55 ವರ್ಷ. ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೆ ಇರುವವರು ಮತ್ತೋಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವದಿಲ್ಲ.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ನಿರೀಕ್ಷಕರು, ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾಡಳಿತ ಭವನ ರೂಮ್ ನಂ-06 ಗದಗ. ಇವರನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP