
ಧಾರವಾಡ, 23 ನವೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರಕಲಾ ಶಿಲ್ಪಿ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ದಿಂದ ನವೆಂಬರ್ 28, 2025 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ ಗ್ಯಾಲರಿಯಲ್ಲಿ ಶ್ರೀ. ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಕಲಾವಿದರಿಂದ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ.
ನವೆಂಬರ್ 29, 2025 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಚಿತ್ರಕಲಾ ಶಿಲ್ಪಿ ಡಿ.ವ್ಹಿ. ಹಾಲಭಾವಿ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಶುಭಾಂಗಿ ಜಾಧವ ಅವರ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರು:
ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್‍ದಿಂದ ಬೆಂಗಳೂರಿನ ಹಿರಿಯ ಚಿತ್ರಕಲಾವಿದ ಬಿ. ಜಿ. ಗುಜಾರಪ್ಪ ಅವರಿಗೆ 2025 ನೇ ಸಾಲಿನ ಜೀವಮಾನ ಸಾಧನೆಯ ಕುಂಚ ಕಲಾತಪಸ್ವಿ ರಾಷ್ಟ್ರೀಯ ಪ್ರಶಸ್ತಿ, ಕಲಬುರ್ಗಿಯ ಚಿತ್ರಕಲಾವಿದ ಚಂದ್ರಹಾಸ ವಾಯ್‍ಜಾಲಿಹಾಳ ಅವರಿಗೆ 2025 ನೇ ಸಾಲಿನ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿ, ಹಾಗೂ ಇಬ್ಬರು ಯುವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದ್ದು, ದೀಪಾಲಿ ಸಂದೇಶಖುಲೆ. ಎಸ್ ಅವರಿಗೆ ಹಾಗೂ ನಾಮದೇವ ಪಟ್ಟೇಕರ ಅವರಿಗೆ 2025 ನೇ ಸಾಲಿನ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುವುದು.
ಡಾ.ಲೋಹಿತ್ ನಾಯ್ಕರ್ ಅವರು ಪ್ರಶಸ್ತಿ ಪ್ರದಾನ ಮಾಡುವರು. ಟ್ರಸ್ಟ್ ಅಧ್ಯಕ್ಷ ಬಿ. ಮಾರುತಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಕರ್ನಾಟಕ ವಿದ್ಯಾವರ್ಧಕ ಸಂಘ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಅತಿಥಿಗಳಾಗಿ ಆಗಮಿಸುವರು. ಡಾ. ಜಗದೀಶ ಕೊಪ್ಪ ಅಭಿನಂದನಾ ಪರ ಮಾತನಾಡಲಿದ್ದಾರೆ. ಹಿರಿಯ ಕಲಾವಿದರಾದ ಸುರೇಶ ಹಾಲಭಾವಿ ಅವರು ಹಾಗೂ ಟ್ರಸ್ಟಿನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಟ್ಟಸ್ಟ್‍ನ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa