ನೊಂದ ರೈತನಿಗೆ ರೈತ ಸಂಘದಿಂದ ಧನ ಸಹಾಯ
ಗದಗ, 23 ನವೆಂಬರ್ (ಹಿ.ಸ.) ಆ್ಯಂಕರ್: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಇಬ್ಬರು ಬಡ ರೈತರ 10 ಎಕರೆ ಜಮೀನಿನಲ್ಲಿ ಬೆಳೆದಂತಹ ಗೋವಿನ ಜೋಳಕ್ಕೆ ರಾತ್ರಿ ಸಮಯದಲ್ಲಿ ಟ್ರ್ಯಾಕ್ಟರ್ ಮುಖಾಂತರ ದುಷ್ಕರ್ಮಿಗಳು ಬೆಳೆಯನ್ನು ಹಾಳು ಮಾಡಿರುವ ಕೃತ್ಯವನ್ನು ಖಂಡಿಸಿ ಹಾಗೂ ನೊಂದ ರೈತರಿ
ಫೋಟೋ


ಗದಗ, 23 ನವೆಂಬರ್ (ಹಿ.ಸ.)

ಆ್ಯಂಕರ್:

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಇಬ್ಬರು ಬಡ ರೈತರ 10 ಎಕರೆ ಜಮೀನಿನಲ್ಲಿ ಬೆಳೆದಂತಹ ಗೋವಿನ ಜೋಳಕ್ಕೆ ರಾತ್ರಿ ಸಮಯದಲ್ಲಿ ಟ್ರ್ಯಾಕ್ಟರ್ ಮುಖಾಂತರ ದುಷ್ಕರ್ಮಿಗಳು ಬೆಳೆಯನ್ನು ಹಾಳು ಮಾಡಿರುವ ಕೃತ್ಯವನ್ನು ಖಂಡಿಸಿ ಹಾಗೂ ನೊಂದ ರೈತರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿ ಅವರ ಬಣದ ಮುಂಡರಗಿ ತಾಲೂಕಿನ ಮಹಿಳಾ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಕುಡುಪಲಿ ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಿರೇಮಠ ಅವರು ಹಾರೂಗೇರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಮುಂಡರಗಿ ತಾಲೂಕು ಹಸಿರು ಸೇನೆ ವತಿಯಿಂದ ಧನಸಹಾಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಮುಂಡರಗಿ ತಾಲ್ಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande