ಕನ್ನಡ ನಾಡು ಸಂಪದ್ಭರಿತವಾದ ನಾಡು : ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು
ಗದಗ, 23 ನವೆಂಬರ್ (ಹಿ.ಸ.) : ಆ್ಯಂಕರ್ : ಬೇರೆ ಬೇರೆ ಕಡೆಗೆ ಹಂಚಿಹೋಗಿದ್ದ ಪ್ರದೇಶಗಳನ್ನು ಒಂದುಗೂಡಿಸಿದ ಶ್ರೇಯಸ್ಸು ಏಕೀಕರಣಕ್ಕೆ ಹೋರಾಡಿದ ನೇತಾರರಿಗೆ ಸಲ್ಲುತ್ತದೆ. ಕನ್ನಡ ನಾಡು ಸಂಪದ್ಭರಿತವಾದ ನಾಡು ಎಂದು ಜಗದ್ಗುರು ಡಾ ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಮಾತನಾಡಿದರು. ಗದಗ ನಗರದ ಲಿಂಗಾಯತ ಪ್
ಫೋಟೋ


ಗದಗ, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಬೇರೆ ಬೇರೆ ಕಡೆಗೆ ಹಂಚಿಹೋಗಿದ್ದ ಪ್ರದೇಶಗಳನ್ನು ಒಂದುಗೂಡಿಸಿದ ಶ್ರೇಯಸ್ಸು ಏಕೀಕರಣಕ್ಕೆ ಹೋರಾಡಿದ ನೇತಾರರಿಗೆ ಸಲ್ಲುತ್ತದೆ. ಕನ್ನಡ ನಾಡು ಸಂಪದ್ಭರಿತವಾದ ನಾಡು ಎಂದು ಜಗದ್ಗುರು ಡಾ ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಮಾತನಾಡಿದರು.

ಗದಗ ನಗರದ ಲಿಂಗಾಯತ ಪ್ರಗತಿಶೀಲ ಸಂಘದ 2772 ನೆಯ ಶಿವಾನುಭವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಹೆಚ್ಚು ಹೆಚ್ಚು ಆಗಬೇಕು. ಈ ನೆಲ ಜಲ ತರುಗಳಲ್ಲಿ ವಿಶೇಷತೆ ಇದೆ. ನಮ್ಮ ನಾಡು ನಮ್ಮ ನುಡಿ ಎನ್ನದೆ ಮಾನವನೆದೆ ಸುಡುಗಾಡು ಎನ್ನುತ್ತಾರೆ ಕವಿ ಕುವೆಂಪು. ಕನ್ನಡಿಗರು ನಿರಭಿಮಾನಿಗಳಾಗದೇ ಕನ್ನಡಾಭಿಮಾನಿಗಳು ಆಗಬೇಕು. ಕನ್ನಡ ನುಡಿ ಮನವನು ಸೆಳೆವ ಮೋಹನ್ ಸುಧೆ. ಕನ್ನಡದ ಗ್ರಂಥಗಳನ್ನು ಓದುವುದರ ಮೂಲಕ ಆ ಸವಿಯನ್ನು ಸವಿಯಬಹುದು ಎಂದು ಆಶೀರ್ವಚನ ನೀಡಿದರು.

ಸಮ್ಮುಖವನ್ನು ವಹಿಸಿದ ಶಾಂತಲಿಂಗ ಸ್ವಾಮಿಗಳು ಮಾತನಾಡಿ, ಕನ್ನಡದ ಅನೇಕ ಆಯಾಮಗಳನ್ನು ಅವಲೋಕನ ಮಾಡುವುದು ಸಹಜ. ತೋಂಟದಾರ್ಯ ಮಠ ಕನ್ನಡಕ್ಕಾಗಿ ಕೈಯೆತ್ತಿದ ಮಠ. ಡಾ.ಸಿದ್ದಲಿಂಗ ಶ್ರೀಗಳು ಗೋಕಾಕ ಚಳವಳಿಯ ಸಂದರ್ಭದಲ್ಲಿ ಹೋರಾಟಗಾರೊಂದಿಗೆ ತಹಶೀಲ್ದಾರ್ ಕಚೇರಿ ಮುಂದೆ ಕುಳಿತು ಹೋರಾಟ ಮಾಡಿದರು. ಕನ್ನಡಕ್ಕೆ ಹೋರಾಡಿದ ಮಹನೀಯರನ್ನು ಕೃತಜ್ಞತೆಯಿಂದ ನೆನೆಯಬೇಕು ಎಂದರು.

ಧಾರವಾಡದ ಅಂಜುಮನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ರುದ್ರೇಶ ಮೇಟಿ ಮಾತನಾಡಿ, ನಾನು ಚೆನ್ನಾಗಿ ಬದುಕಿದ್ದೇನೆ ಎಂದರೆ ಅದು ಕನ್ನಡದಿಂದ. ನನ್ನ ನೌಕರಿ ಕನ್ನಡದ್ದು. ನನ್ನ ಭಾಷೆ ಕನ್ನಡ. ನಾನು ಸಾಧನೆ ಮಾಡಿದ್ದು ಕನ್ನಡದಲ್ಲಿ. ಆದರೆ ಯುಪಿಎಸ್‍ಸಿ ಯಲ್ಲಿ ಕನ್ನಡ ಇದೆ. ಆದರೆ ಕೆಪಿಎಸ್‍ಸಿ ಯಲ್ಲಿ ಕನ್ನಡವಿಲ್ಲ. ನಮಗೆ ಪ್ರದೇಶದ ಪ್ರೀತಿಗಿಂತಲೂ ನಾಡಿನ ಬಗ್ಗೆ ಪ್ರೀತಿ ಬೇಕು. ಭಾರತ ದೇಶ ಏನಾದರೂ ಏಳ್ಗೆಯಾಗುವದಿದ್ದರೆ ಅದು ಕನ್ನಡದಿಂದಲೇ ಎಂದು ಬೇಂದ್ರೆಯವರು ಮನೆಯ ಮುಂದೆ ಬರೆದಿರುವರು. ಈ ಅಭಿಮಾನ ಬರಬೇಕು ಎಂದು ಹೇಳಿದರು.

ಮುಖ್ಯಅತಿಥಿಗಳಾಗಿ ಡಾ. ಬಸವರಾಜ ಮಲ್ಲೂರು ಪ್ರಾಚಾರ್ಯರು ಸರ್ಕಾರಿ ಐಟಿಐ ಬೆಟಗೇರಿ-ಗದಗ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಗದಗ ಇವರು ಉಪಸ್ಥಿತರಿದ್ದರು. ಬೆಸ್ಟ್ ಪರ್ಫಾರ್ಮಿಂಗ್ ಐಟಿಐ ಆಫ್ ಕರ್ನಾಟಕ ಪ್ರಶಸ್ತಿ ಪಡೆದ ರಾಜ್ಯದ ಏಕೈಕ ಐಟಿಐ ಶಿರೋಳದ ಪ್ರಾಚಾರ್ಯರಾದ ಬಿ ಎಸ್ ಸಾಲಿಮಠ ಹಾಗೂ ಸಿಬ್ಬಂದಿವರ್ಗದವರನ್ನು ಇದೇ ಸಂದರ್ಭದಲ್ಲಿ ಶ್ರೀಮಠದಲ್ಲಿ ಸನ್ಮಾನಿಸಲಾಯಿತು.

ರಾಜೇಶ್ವರಿ ಕಲಾ ಕುಟೀರ ಗದಗ ಮಕ್ಕಳಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು. ನಾಡು ನುಡಿಯ ನೃತ್ಯ ರೂಪಕವನ್ನು ಬಸವೇಶ್ವರ ಪ್ರಾಥಮಿಕ ಶಾಲೆ ಸಿದ್ದಲಿಂಗ ನಗರ ಗದಗ ವಿದ್ಯಾರ್ಥಿಗಳು ತುಂಬಾ ಸುಂದರವಾಗಿ ಪ್ರದರ್ಶನ ನೀಡಿದರು. ವಚನ ಸಂಗೀತ ಸೇವೆಯನ್ನು ಗುರುನಾಥ್ ಸುತಾರ ಹಾಗೂ ಮೃತ್ಯುಂಜಯ ಹಿರೇಮಠ ನಡೆಸಿಕೊಟ್ಟರು. ಧರ್ಮಗ್ರಂಥ ಪಠಣವನ್ನು ವೃತ್ವಿಕ ವಿ ಹೂಗಾರ, ವಚನ ಚಿಂತನವನ್ನು ಶ್ರೇಯಸ್ ವಿ ಅಂಗಡಿ ನಡೆಸಿದರು. ದಾಸೋಹ ಸೇವೆಯನ್ನು ಬಸವರಾಜ ಭೀಮಪ್ಪ ಅಸ್ಕಿ, ದೇವರ ಹಿಪ್ಪರಗಿ ಮತ್ತು ಶಿವಪ್ಪ ಮಲ್ಲಪ್ಪ ಜಡಗೊಂಡ ಮತ್ತು ಕುಟುಂಬ ವರ್ಗದವರು ದೇವರ ಹಿಪ್ಪರಗಿ ವಹಿಸಿದ್ದರು. ಸನ್ಮಾನಿತರ ಪರಿಚಯವನ್ನು ವೀರನಗೌಡ ಮರಿಗೌಡ್ರ ನಿರ್ವಹಿಸಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷ ಡಾ ಉಮೇಶ ಪುರದ ಹಾಗೂ ವಿದ್ಯಾ ಪ್ರಭು ಗಂಜಿಹಾಳ ಕಾರ್ಯದರ್ಶಿ ವೀರಣ್ಣ ಗೋಟಡಕಿ ಸಹಕಾರ್ಯದರ್ಶಿ ಸೋಮನಾಥ ಪುರಾಣಿಕ ಹಾಗೂ ನಾಗರಾಜ್ ಹಿರೇಮಠ ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ ರವರು ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ ಹಾಗೂ ಶಿವಾನುಭವ ಸಮಿತಿಯ ಸಹ ಚೇರ್ಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್ಮನ್ ಐ ಬಿ ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande