
ಕೋಲಾರ, ೨೩ ನವೆಂಬರ್ (ಹಿ.ಸ) :
ಆ್ಯಂಕರ್ : ಕರ್ನಾಟಕದ ನೆಲ, ಜಲ, ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಬಾರದು. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು
ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಗಂಗಾಪುರ ಗ್ರಾಮದಲ್ಲಿ ಭಾನುವಾರ ೭೦ನೇ ಕನ್ನಡ ರಾಜ್ಯೋತ್ಸವ ಹಾಗೂ ಸಂಘದ ೨೪ ನೆಯ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹನೀಯರ ಕನ್ನಡ ಬೆಳೆವಣಿಗೆಗೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ ಗಡಿ ಜಿಲ್ಲೆಯಲ್ಲಿ ಕನ್ನಡ ಹೋರಾಟಗಳಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ನಾಡು ನುಡಿಯ ರಕ್ಷಣೆಗೆ ಹಾಗೂ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸಲು ಕನ್ನಡಿಗರ ಏಳ್ಗೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.
ಇ0ದು ನಾವೆಲ್ಲ ಸಂಭ್ರಮದಿ0ದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮಗೆಲ್ಲ ತಿಳಿದಿರುವಂತೆ ಭಾರತ ಸ್ವತಂತ್ರಗೊಡು ಗಣರಾಜ್ಯ ಉದಯವಾದ ಸಂದರ್ಭದಲ್ಲಿ ಈಗಿನ ಕರ್ನಾಟಕವು ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು .ಅದಾದ ೧೭ ವರ್ಷಗಳ ನಂತರ ಅಂದರೆ ೧೯೭೩ ನವೆಂಬರ್ ೧ ರಂದು ದೇವರಾಜ್ ಅರಸುರವರು ಕರ್ನಾಟಕ ಎಂದು ನಾಮಕರಣ ಮಾಡಿದರು ಎಂದು ವಿವರಿಸಿದರು.
ಗಂಗಾಪುರ ಗ್ರಾಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ೫ ಲಕ್ಷ ವೆಚ್ಚದ ಹೈಮಾಸ್ಕ್ ಲೈಟ್, ೯ ಲಕ್ಷ ವೆಚ್ಚದ ಶುದ್ದನೀರಿನ ಘಟಕ, ರಸ್ತೆ ಮತ್ತು ಚರಂಡಿಗೆ ೧೨ ಲಕ್ಷ, ಗಂಗಾಪುರ ಗೇಟ್ ನಿಂದ ಊರು ತನಕ ೫೦ ಲಕ್ಷ ವೆಚ್ಚದ ಡಾಂಬರೀಕರಣ, ಆಂಜನೇಯ ದೇವಾಲಯದ ಅಭಿವೃದ್ಧಿಗೆ ೪ ಲಕ್ಷ ಸೇರಿದಂತೆ ಒಟ್ಟು ೮೦ ಲಕ್ಷ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿದೆ ಎಂದರು.
ಬೆAಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಮಾತನಾಡಿ ದೇಶದ ಭಾಷೆ ಮತ್ತು ಸಾಹಿತ್ಯ ಪರಂಪರೆಯಲ್ಲಿ ಕನ್ನಡ ನಾಡು ಮತ್ತು ನುಡಿಗೆ ಉನ್ನತವಾದ ಸ್ಥಾನವಿದೆ ಮತ್ತು ಸುಮಾರು ೨೫೦೦ ವರ್ಷಗಳಿಗೂ ಮೀರಿದ ಇತಿಹಾಸವಿದೆ ಕನ್ನಡದ ಮೇಲೆ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಬೇಕಾದದ್ದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯವಾಗಿದೆ ಯುವಕರಲ್ಲಿನ ಒಗ್ಗಟ್ಟು ಇದೇ ರೀತಿಯಲ್ಲಿ ಇರಬೇಕು ಎಂದರು.
ಕಾರ್ಯಕ್ರಮದಲ್ಲಿ ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್, ವಕ್ಕಲೇರಿ ಸೊಸೈಟಿ ಅಧ್ಯಕ್ಷ ಪಾಲಾಕ್ಷಗೌಡ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಅಧ್ಯಕ್ಷ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಉಪಾಧ್ಯಕ್ಷ ಎಂ. ಆನಂದ್ ಕುಮಾರ್, ಸದಸ್ಯ ಶ್ರೀನಿವಾಸ್, ಕನ್ನಡ ಉಪನ್ಯಾಸಕ ಹನೀಫ್ ಸಾಬ್, ಮುಖಂಡರಾದ ಚಿದಾನಂದ್, ರಮೇಶ್, ಜನಪನಹಳ್ಳಿ ನವೀನ್ ಕುಮಾರ್ ಪ್ರಕಾಶ್, ಯಳಚಪ್ಪ, ಭುವನೇಶ್ವರಿ ಕನ್ನಡ ಯುವಕರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ನಾಗರಾಜ್, ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಮುನಿಯಪ್ಪ, ಕಾರ್ಯದರ್ಶಿ ಮೋಹಿತ್ ಗೌಡ, ಖಜಾಂಚಿ ಸುರೇಶ್, ನರಸಿಂಹ ಭಾಗವಹಿಸಿದ್ದರು.
ಚಿತ್ರ : ಕೋಲಾರ ತಾಲ್ಲೂಕಿನ ಗಂಗಾಪುರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್