
ರಾಯಚೂರು, 23 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರು ಜಿಲ್ಲಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ಡಿಸೆಂಬರ್ 13ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.
ಲೋಕ ಅದಾಲತ್‍ನ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮತ್ತು ಕ್ರೀಮಿನಲ್ (ರಾಜಿಯಾಗುವಂತಹ) ಮೊಕದಮ್ಮೆಗಳ ಜೊತೆಗೆ ಮೋಟಾರ ವಾಹನ ಪ್ರಕರಣಗಳು ಮತ್ತು ಎಲ್ಲಾ ಬಗೆಯ ಪ್ರಕರಣಗಳನ್ನು (ಕೇಸುಗಳನ್ನು) ಲೋಕ ಅದಾಲತ್ ಮುಖಾಂತರ ಇತ್ಯರ್ಥಗೊಳಿಸಲಾಗುವುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು (ಕೇಸುಗಳನ್ನು) ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ವಕೀಲರು ಹಾಗೂ ಕಕ್ಷಿದಾರರಿಗೆ ಸದಾವಕಾಶ ಒದಗಿಸಲಾಗಿದೆ. ಆದ್ದರಿಂದ ಎಲ್ಲಾ ವಕೀಲರು, ಕಕ್ಷಿದಾರರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಎಲ್ಲಾ ಬಗೆಯ ಕೇಸುಗಳನ್ನು ಲೋಕ ಅದಾಲತನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆಗಿರುವ ಹಿರಿಯ ಶ್ರೇಣಿಯ ದಾವಾಣಿ ನ್ಯಾಯಾಧೀಶರಾದ ಹೆಚ್ ಎ ಸಾತ್ವಿಕ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್