

ರಾಯಚೂರು, 23 ನವೆಂಬರ್ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಭಾಗದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಶಿಕ್ಷಣದಿಂದ ಮಾತ್ರ ಗ್ರಾಮೀಣ ಭಾಗ ಅಭಿವೃದ್ಧಿ ಹೊಂದಲು ಸಾಧ್ಯ ಹಾಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ಮಾನ್ವಿ ವಿಧಾನಸಭಾ ಕ್ಷೇತ್ರದ ಮರಾಠ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಕೆಕೆ ರ್‌ಡಿಬಿ ಯಿಂದ 50 ಲಕ್ಷ ರೂನಲ್ಲಿ 4 ಹೆಚ್ಚುವರಿ ಕೊಠಡಿಗಳು, ಮೈಕ್ರೋ ಅನುದಾನದಲ್ಲಿ 2 ಹೆಚ್ಚುವರಿ ಕೊಠಡಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ 14.50 ಲಕ್ಷ ರುನ 1 ಹೆಚ್ಚುವರಿ ಕೊಠಡಿ ನಿರ್ಮಾಣ ಹಾಗೂ ಲೋಕಸಭಾ ಸಂಸದರ ಅನುದಾನದಲ್ಲಿ ಸಿದ್ದರಾಮೇಶ್ವರ ದೇವಸ್ಥಾನ ಮುಂಭಾಗದಲ್ಲಿ 50 ಲಕ್ಷ ರೂ ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವ ಎನ್ ಎಸ್ ಬೋಸರಾಜು ಸಂಸದ ಜಿ ಕುಮಾರ ನಾಯಕ ಶಾಸಕ ಹಂಪಯ್ಯ ನಾಯಕ ಅವರು ಜಂಟಿಯಾಗಿ ಕಾಮಗಾರಿಗೆ ಚಾಲನೆ ನೀಡಿದರು.
ಶ್ರೀ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಆಗಮಿಸಲು ಸರಿಯಾದ ರಸ್ತೆ ಹಾಗೂ ಕುಡಿಯುವ ನೀರು, ವಿದ್ಯುತ್ ಸಂಪರ್ಕವನ್ನು ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತೇನೆ ಹಾಗೂ ಆದಷ್ಟು ಬೇಗನೆ ಹೆಚ್ಚಿನ ಅನುದಾನವನ್ನು ಈ ಭಾಗಕ್ಕೆ ನೀಡುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು, ನಿಮ್ಮೆಲ್ಲರ ಅಭಿಮಾನದ ಸಹಕಾರ, ಪ್ರೀತಿ, ವಿಶ್ವಾಸ ನಮ್ಮ ಮೇಲಿರಲಿ ಎಂದು ತಿಳಿಸಿದರು.
ನಂತರ ಸಂಸದರಾದ ಜಿ ಕುಮಾರ ನಾಯಕ ಮಾತನಾಡಿ, ಶ್ರೀ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗಲಿ ಎಂದು ನನ್ನ ಅನುದಾನದಲ್ಲಿ 50 ಲಕ್ಷ ರೂ ವೆಚ್ಚವನ್ನು ಸಮುದಾಯ ಭವನ ನಿರ್ಮಾಣಕ್ಕೆ ನೀಡಿದ್ದೇನೆ. ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಿ ಉತ್ತಮ ಗುಣಮಟ್ಟದೊಂದಿಗೆ ಭವನವನ್ನ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲಿಸಬೇಕು ಎಂದು ತಿಳಿಸಿದರು.
ನಂತರ ಶಾಸಕರಾದ ಹಂಪಯ್ಯ ಜಿ ನಾಯಕ ರವರು ಮಾತನಾಡಿ, ಮೊದಲಿನಿಂದಲೂ ಮಾರಾಟದ ಜನರ ಪ್ರೀತಿ ವಿಶ್ವಾಸ ನನ್ನ ಮೇಲೆ ಅಪಾರವಿದೆ. ಗ್ರಾಮಸ್ಥರು ಹಾಗೂ ಭಕ್ತಾದಿಗಳ ಬೇಡಿಕೆಯಿಂದಾಗಿ ಈ ಕ್ಷೇತ್ರಕ್ಕೆ ಸಂಸದರಿಗೆ ಮೀಸಲಿರುವ ಅನುದಾನವನ್ನು ಸಮುದಾಯ ಭವನ ನಿರ್ಮಾಣಕ್ಕೆ ನೀಡಿದ್ದು ನಾವು ಸಂಸದರು ಹಾಗೂ ಸಚಿವರು ಸೇರಿ ಮಾನ್ವಿ ವಿಧಾನ ಸಭಾ ಕ್ಷೇತ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಅಶೋಕ್ ಪವಾರ್ ಕಾಂಗ್ರೆಸ್ ಮುಖಂಡರಾದ ಚುಕ್ಕಿ ಶಿವಕುಮಾರ್, ಬ್ರಿಜೇಶ್ ಪಾಟೀಲ್, ರಮೇಶ ದರ್ಶನಕರ್, ಆಜಿ ಖಾತ್ರಿ, ಹನುಮಂತ, ಶಿವಕುಮಾರ್ ಅರಕೇರಿ, ರುದ್ರಪ್ಪ ಅಂಗಡಿ, ಬಸವರಾಜ ಪಾಟೀಲ್, ರೇಣುಕಾ, ನಾಗಪ್ಪ, ಶ್ರೀನಿವಾಸ್, ಹನುಮಂತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್