ಸಣಬ ಹಾಲು ಉತ್ಪಾದಕರ ಸಂಘದ ನೂತನ ಡೈರಿ ಕಟ್ಟಡ ಉದ್ಘಾಟನೆ
ಮಂಡ್ಯ, 23 ನವೆಂಬರ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಸಣಬ ಹಾಲು ಉತ್ಪಾದಕರ ಸಂಘ ಸಹಕಾರ ನಿಯಮಿತದ ನೂತನ ಡೈರಿ ಕಟ್ಟಡವನ್ನು ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಹೈನುಗಾರಿಕೆಗೆ ಉತ್ತೇಜನ ನೀಡುವುದ
Inauguration


ಮಂಡ್ಯ, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಸಣಬ ಹಾಲು ಉತ್ಪಾದಕರ ಸಂಘ ಸಹಕಾರ ನಿಯಮಿತದ ನೂತನ ಡೈರಿ ಕಟ್ಟಡವನ್ನು ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಹೈನುಗಾರಿಕೆಗೆ ಉತ್ತೇಜನ ನೀಡುವುದು ಮತ್ತು ಹೈನುಗಾರರ ಆರ್ಥಿಕ ಸಬಲೀಕರಣ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ಸರ್ಕಾರದ ಯೋಜನೆಗಳು ಹೈನುಗಾರರ ಆದಾಯ ಹೆಚ್ಚಿಸಲು, ಹಾಲು ಉತ್ಪಾದನಾ ಶ್ರೇಣಿಯನ್ನು ಆಧುನಿಕಗೊಳಿಸಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಸಹಕಾರಿಯಾಗಿವೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಸ್ಥಳೀಯ ರೈತರು ಮತ್ತು ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande