ರೈತರಿಗೆ ಸಮಗ್ರ ಕೃಷಿ ಪದ್ಧತಿ, ಹೈನುಗಾರಿಕೆ-ಕುರಿ-ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ
ವಿಜಯಪುರ, 23 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಡಿ.1 ರಿಂದ ಡಿ.06ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿ- ಹೈನುಗಾರಿಕೆ,ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ. 6 ದಿ
ರೈತರಿಗೆ ಸಮಗ್ರ ಕೃಷಿ ಪದ್ಧತಿ, ಹೈನುಗಾರಿಕೆ-ಕುರಿ-ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ


ವಿಜಯಪುರ, 23 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಡಿ.1 ರಿಂದ ಡಿ.06ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿ- ಹೈನುಗಾರಿಕೆ,ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.

6 ದಿನಗಳ ಕಾಲ ನಡೆಯುವ ಈ ವಿಶೇಷ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಮೊಬೈಲ್ 8050277792 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande