ವಿಕಲಚೇತನರಿಗೆ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ
ಹಾಸನ, 23 ನವೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿಕಲಚೇತನರ ಸಂಘ ಸಂಸ್ಥೆಗಳು ಹಾಸನ ಇವರುಗಳ ಸ
ವಿಕಲಚೇತನರಿಗೆ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ


ಹಾಸನ, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿಕಲಚೇತನರ ಸಂಘ ಸಂಸ್ಥೆಗಳು ಹಾಸನ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-2025ರ ಪ್ರಯುಕ್ತ ವಿಕಲಚೇತನರು ಮತ್ತು ವಿಶೇಷ ಶಾಲೆಗಳ ಮಕ್ಕಳಿಗೆ ಸಾಂಸ್ಕೃತಿಕ/ಕ್ರೀಡಾ ಸ್ಪರ್ಧೆಗಳನ್ನು ನ.26 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣ, ಸಾಲಗಾಮೆ ರಸ್ತೆ, ಹಾಸನ ಇಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿರುತ್ತದೆ.

ಹಾಸನ ಜಿಲ್ಲೆಯಲ್ಲಿರುವ ವಿಕಲಚೇತನರು ಹಾಗೂ ವಿಶೇಷ ಶಾಲೆಯ ಮಕ್ಕಳು ಕ್ರೀಡಾ/ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸಹಕರಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್. ಪುರಂ, ಹಾಸನ ಇವರನ್ನು ದೂರವಾಣಿ ಸಂಖ್ಯೆ;08172-264546/295546 ಮೂಲಕ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande