

ರಾಯಚೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ 17 ವರ್ಷದೊಳಗಿನ ಬಾಲಕೀಯರ ಜಿಲ್ಲಾ ಮಟ್ಟದ ಹ್ಯಾಮರ್ ಥ್ರೋನಲ್ಲಿ ನಗರದ ಯರಗೇರಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಕವಿತಾ ತಂದೆ ತಾಯಪ್ಪ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಕೋರಿದ್ದಾರೆ ಎಂದು ಪ್ರಾಂಶುಪಾಲರಾದ ಕೊಟ್ರೇಶ್.ಜೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್