
ಕೋಲಾರ, ೨೪ ನವೆಂಬರ್ (ಹಿ.ಸ) :
ಆ್ಯಂಕರ್ : ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲೆಯಾದ್ಯಂತ ನ.೨೭ ರಂದು ತಾಲೂಕು ಕೇಂದ್ರಗಳಲ್ಲಿ ಹಾಗೂ ಡಿ.೨ ರಂದು ಜಿಲ್ಲಾ ಕೇಂದ್ರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ತಿಳಿಸಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಹೋರಾಟ ಆಯೋಜಿಸಲಾಗಿದೆ. ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಲಾಗುವುದು, ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮೊದಲಾದ ಒತ್ತಾಯಗಳನ್ನು ಮಾಡಲಾಗುವುದು. ಈ ಮೂಲಕ ರೈತರು ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಹೆಚ್ಚಿನ ರೀತಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಡಿಸೆಂಬರ್ ೨ ರಂದು ನಡೆಯಲಿರುವ ಜಿಲ್ಲಾ ಕೇಂದ್ರದಲ್ಲಿನ ಪ್ರತಿಭಟನೆಗೆ ಬಿಜೆಪಿ ಸಂಸದ ಪಿ.ಸಿ ಮೋಹನ್, ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ಮಾಜಿ ಸಂಸದ ಎಸ್.ಮುನಿಸ್ವಾಮಿ, ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೊಮ್ಮನಹಳ್ಳಿ ಆನಂದ್ ತಿಳಿಸಿದ್ದಾರೆ.
ಚಿತ್ರ : ಕೋಲಾರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಆನಂದ್
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್