ಬಿಜೆಪಿಯಿಂದ ಸರಕಾರದ ವಿರುದ್ದ ಅಪಪ್ರಚಾರ : ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
Cm


ಚಿಕ್ಕಬಳ್ಳಾಪುರ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande